Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:12 - ಪರಿಶುದ್ದ ಬೈಬಲ್‌

12 ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ನಾನು ‘ಫಿಲಿಷ್ಟಿಯರು ಗಿಲ್ಗಾಲಿನಲ್ಲಿರುವ ನನ್ನ ಬಳಿಗೆ ಬಂದು ನನ್ನ ಮೇಲೆ ಬಿದ್ದಾರು, ನಾನು ಯೆಹೋವನ ದಯೆಯನ್ನು ಬೇಡಿಕೊಳ್ಳಲಿಲ್ಲ’ ಎಂದು, ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವುದಕ್ಕೆ ಮುಂದಾದೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಯೆಹೋವನಿಗೆ ಶಾಂತ್ಯರ್ಪಣೆಯನ್ನು ಸಲ್ಲಿಸುವದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟು ಸರ್ವಾಂಗಹೋಮವನ್ನು ಸಮರ್ಪಿಸುವದಕ್ಕೆ ಮುಂಗೊಂಡೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:12
9 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ವ್ಯಕ್ತಿಯು ತನ್ನ ಹೃದಯದಲ್ಲಿ ಎಷ್ಟನ್ನು ನಿರ್ಧರಿಸಿಕೊಂಡಿದ್ದಾನೋ ಅಷ್ಟನ್ನೇ ಕೊಡಬೇಕು. ಯಾವನೂ ದುಃಖದಿಂದ ಕೊಡಬಾರದು. ಅಲ್ಲದೆ ಯಾವನೂ ಒತ್ತಾಯದ ದೆಸೆಯಿಂದ ಕೊಡಬಾರದು. ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುತ್ತಾನೆ.


ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.


ದೇವರೇ, ನಿನ್ನ ಕಾರ್ಯಗಳು ಎಷ್ಟು ಅದ್ಭುತವಾಗಿವೆ! ನಿನ್ನ ಮಹಾಶಕ್ತಿಯಿಂದಾಗಿ ಶತ್ರುಗಳು ನಿನಗೆ ಭಯಪಟ್ಟು ಅಡ್ಡಬೀಳುವರು.


ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.


ಸಮುವೇಲನು, “ನೀನು ಮಾಡಿದ್ದೇನು?” ಎಂದು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟುಹೋಗುತ್ತಿರುವುದನ್ನೂ ನೀನು ನಿಯಮಿತಕಾಲದಲ್ಲಿ ಇಲ್ಲಿ ಇಲ್ಲದಿರುವುದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಒಟ್ಟುಗೂಡುತ್ತಿರುವುದನ್ನೂ ನೋಡಿದೆನು.


ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.


ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.


ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು