1 ಸಮುಯೇಲ 13:14 - ಪರಿಶುದ್ದ ಬೈಬಲ್14 ಆದರೆ ಈಗ ನಿನ್ನ ಆಳ್ವಿಕೆಯು ಮುಂದುವರಿಯುವುದಿಲ್ಲ. ಯೆಹೋವನು ತನಗೆ ವಿಧೇಯನಾಗಿರುವಂತಹ ಮನುಷ್ಯನಿಗಾಗಿ ಹುಡುಕುತ್ತಿದ್ದನು. ಯೆಹೋವನಿಗೆ ಅಂತಹ ಮನುಷ್ಯನು ಸಿಕ್ಕಿದ್ದಾನೆ. ತನ್ನ ಜನರನ್ನು ಆಳಲು ಯೆಹೋವನು ಅವನನ್ನು ಹೊಸ ನಾಯಕನನ್ನಾಗಿ ನೇಮಿಸುತ್ತಾನೆ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಲಿಲ್ಲ. ಆದ್ದರಿಂದ ಯೆಹೋವನು ಹೊಸ ನಾಯಕನನ್ನು ಆರಿಸಿಕೊಳ್ಳುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಈಗಲಾದರೋ ನಿನ್ನ ಅರಸುತನವು ನಿಲ್ಲುವುದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆ ಹೋದುದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇಮಿಸಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈಗಲಾದರೋ ನಿನ್ನ ಅರಸುತನವು ನಿಲ್ಲುವದಿಲ್ಲ; ನೀನು ಯೆಹೋವನ ಆಜ್ಞೆಯನ್ನು ಕೈಕೊಳ್ಳದೆಹೋದದರಿಂದ ಆತನು ತನಗೆ ಒಪ್ಪುವ ಬೇರೊಬ್ಬ ಪುರುಷನನ್ನು ತನ್ನ ಪ್ರಜೆಯ ಮೇಲೆ ಪ್ರಭುವಾಗಿ ನೇವಿುಸಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.