1 ಸಮುಯೇಲ 13:15 - ಪರಿಶುದ್ದ ಬೈಬಲ್15 ನಂತರ ಸಮುವೇಲನು ಎದ್ದು ಗಿಲ್ಗಾಲನ್ನು ಬಿಟ್ಟುಹೊರಟನು. ಸೌಲನು ತನ್ನ ಸೈನ್ಯಸಮೇತವಾಗಿ ಗಿಲ್ಗಾಲಿನಿಂದ ಹೊರಟನು. ಅವರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಸೌಲನು ತನ್ನೊಂದಿಗೆ ಇನ್ನೂ ಇದ್ದ ಜನರನ್ನು ಲೆಕ್ಕ ಹಾಕಿದನು. ಅವನ ಜೊತೆಯಲ್ಲಿ ಆರುನೂರು ಜನರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಎಣಿಸಿದಾಗ ಆರುನೂರು ಮಂದಿಯಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಲೆಕ್ಕಿಸಿದಾಗ ಆರುನೂರು ಮಂದಿಯಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು. ಅಧ್ಯಾಯವನ್ನು ನೋಡಿ |
ಸಮುವೇಲನು ಮಾರನೆಯ ದಿನ ಬೆಳಿಗ್ಗೆ ಮೇಲೆದ್ದು, ಸೌಲನನ್ನು ಭೇಟಿಮಾಡಲು ಹೋದನು. ಆದರೆ ಜನರೆಲ್ಲ ಸಮುವೇಲನಿಗೆ, “ಸೌಲನು ತನ್ನ ಗೌರವಾರ್ಥವಾಗಿ ಜ್ಞಾಪಕಸ್ತಂಭವನ್ನು ನಿರ್ಮಿಸಲು ಕರ್ಮೆಲ್ ಎಂಬ ಪಟ್ಟಣಕ್ಕೆ ಹೋದನು. ನಂತರ ಸೌಲನು ಕೆಲವು ಪ್ರದೇಶಗಳನ್ನು ಸುತ್ತಿಕೊಂಡು ಗಿಲ್ಗಾಲಿಗೆ ಹೋದನು” ಎಂದು ಹೇಳಿದರು. ಸಮುವೇಲನು ಸೌಲನಿದ್ದ ಸ್ಥಳಕ್ಕೆ ಹೋದನು. ಸೌಲನು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳನ್ನು ಪ್ರಥಮ ಸರ್ವಾಂಗಹೋಮವಾಗಿ ಯೆಹೋವನಿಗೆ ಅರ್ಪಿಸುತ್ತಿದ್ದನು.