Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:20 - ಪರಿಶುದ್ದ ಬೈಬಲ್‌

20 ಫಿಲಿಷ್ಟಿಯರು ಮಾತ್ರ ಕಬ್ಬಿಣದ ವಸ್ತುಗಳನ್ನು ಹರಿತಗೊಳಿಸುತ್ತಿದ್ದರು. ಆದ್ದರಿಂದ ಇಸ್ರೇಲರು ತಮ್ಮ ನೇಗಿಲುಗಳನ್ನು, ಗುದ್ದಲಿಗಳನ್ನು, ಸಲಿಕೆಗಳನ್ನು ಮತ್ತು ಕೊಡಲಿಗಳನ್ನು ಹರಿತಗೊಳಿಸಲು ಫಿಲಿಷ್ಟಿಯರ ಹತ್ತಿರಕ್ಕೆ ಹೋಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 (ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹಣಿಸುವುದಕ್ಕಾಗಿ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 (ಅವರು ತಮ್ಮ ನೇಗಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹಣಿಸುವದಕ್ಕೋಸ್ಕರ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದ್ದರಿಂದ ಇಸ್ರಾಯೇಲರೆಲ್ಲಾ ತಮ್ಮ ತಮ್ಮ ನೇಗಿಲಿನ ಗುಳಗಳನ್ನೂ, ಸಲಿಕೆಗಳನ್ನೂ, ಕೊಡಲಿಗಳನ್ನೂ, ಗುದ್ದಲಿಗಳನ್ನೂ ಮೊನೆ ಮಾಡುವುದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:20
5 ತಿಳಿವುಗಳ ಹೋಲಿಕೆ  

ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು. ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ.


ಕಬ್ಬಿಣದಿಂದ ಆಯುಧಗಳನ್ನು ತಯಾರಿಸಲು ಇಸ್ರೇಲರಿಗೆ ಗೊತ್ತಿರಲಿಲ್ಲ. ಇಸ್ರೇಲಿನಲ್ಲಿ ಯಾವ ಕಮ್ಮಾರರೂ ಇರಲಿಲ್ಲ. ಇಸ್ರೇಲರು ಕಬ್ಬಿಣದಿಂದ ಕತ್ತಿಗಳನ್ನು ಮತ್ತು ಈಟಿಗಳನ್ನು ತಯಾರಿಸಬಹುದೆಂಬ ಭೀತಿಯು ಫಿಲಿಷ್ಟಿಯರಿಗೆ ಇದ್ದಕಾರಣ ಅವರು ಇಸ್ರೇಲರಿಗೆ ಕಬ್ಬಿಣದಿಂದ ತಯಾರಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಿರಲಿಲ್ಲ.


ಫಿಲಿಷ್ಟಿಯರ ಕಮ್ಮಾರರು ನೇಗಿಲನ್ನಾಗಲಿ ಕಳೆಗುದ್ದಲಿಗಳನ್ನಾಗಲಿ ಹರಿತಗೊಳಿಸಲು 1/3 ತೊಲ ಬೆಳ್ಳಿಯನ್ನು ದರವಾಗಿ ತೆಗೆದುಕೊಳ್ಳುತ್ತಿದ್ದರು; ಸಲಿಕೆಯನ್ನಾಗಲಿ ಕೊಡಲಿಯನ್ನಾಗಲಿ ನೇಗಿಲಿನ ಗುಳವನ್ನಾಗಲಿ ಹರಿತಗೊಳಿಸಲು 1/6 ತೊಲ ಬೆಳ್ಳಿಯನ್ನು ತೆಗೆದುಕೊಳ್ಳುತ್ತಿದ್ದರು.


ಅದೇ ಪ್ರಕಾರ ಎಫ್ರಾಯೀಮ್, ಮನಸ್ಸೆ, ಸಿಮೆಯೋನ್ ಮತ್ತು ನಫ್ತಾಲಿ ಪ್ರಾಂತ್ಯಗಳ ಉದ್ದಕ್ಕೂ ಮಾಡಿದನು. ಆ ಪಟ್ಟಣಗಳ ಸಮೀಪದಲ್ಲಿದ್ದ ಹಾಳುಬಿದ್ದವುಗಳಿಗೂ ಅವನು ಹಾಗೆಯೇ ಮಾಡಿದನು.


ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು