Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:22 - ಪರಿಶುದ್ದ ಬೈಬಲ್‌

22 ಆದ್ದರಿಂದ ಯುದ್ಧದ ದಿನ ಸೌಲನ ಬಳಿಯಿದ್ದ ಸೈನಿಕರಲ್ಲಿ ಯಾರ ಹತ್ತಿರವೂ ಕತ್ತಿಯಾಗಲಿ ಈಟಿಯಾಗಲಿ ಇರಲಿಲ್ಲ. ಸೌಲ ಮತ್ತು ಅವನ ಮಗನಾದ ಯೋನಾತಾನನ ಹತ್ತಿರ ಮಾತ್ರ ಕಬ್ಬಿಣದ ಆಯುಧಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗಿರುವುದರಿಂದ ಯುದ್ಧ ಪ್ರಾರಂಭಿಸಿದಾಗ ಸೌಲ ಮತ್ತು ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ, ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೀಗಿದ್ದುದರಿಂದ ಯುದ್ಧ ಪ್ರಾರಂಬಿಸಿದಾಗ ಸೌಲ ಯೋನಾತಾನರ ಹೊರತು, ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಭರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗಿರುವದರಿಂದ ಯುದ್ಧಪ್ರಾರಂಭಿಸಿದಾಗ ಸೌಲ ಯೋನಾತಾನರ ಹೊರತು ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಬರ್ಜಿಯಾಗಲಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯುದ್ಧದ ದಿವಸದಲ್ಲಿ ಸೌಲ ಯೋನಾತಾನರ ಜೊತೆಯಲ್ಲಿದ್ದ ಸಮಸ್ತ ಜನರಲ್ಲಿ ಒಬ್ಬನ ಕೈಯಲ್ಲಾದರೂ ಖಡ್ಗವಾಗಲಿ, ಈಟಿಯಾಗಲಿ ಇರಲಿಲ್ಲ. ಆದರೆ ಸೌಲನಿಗೂ, ಅವನ ಪುತ್ರನಾದ ಯೋನಾತಾನನಿಗೂ ಮಾತ್ರವೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:22
7 ತಿಳಿವುಗಳ ಹೋಲಿಕೆ  

ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.


ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.


ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.


ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ.


ಜನರನ್ನು ರಕ್ಷಿಸಲು ಯೆಹೋವನಿಗೆ ಕತ್ತಿ ಮತ್ತು ಈಟಿಗಳ ಅಗತ್ಯವಿಲ್ಲ ಎಂಬುದು ಇಲ್ಲಿ ಸೇರಿರುವ ಜನರಿಗೆಲ್ಲ ತಿಳಿಯುತ್ತದೆ. ಇದು ಯೆಹೋವನ ಯುದ್ಧ. ಫಿಲಿಷ್ಟಿಯರನ್ನೆಲ್ಲ ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡುತ್ತಾನೆ” ಎಂದು ಹೇಳಿದನು.


ಫಿಲಿಷ್ಟಿಯರ ಕಮ್ಮಾರರು ನೇಗಿಲನ್ನಾಗಲಿ ಕಳೆಗುದ್ದಲಿಗಳನ್ನಾಗಲಿ ಹರಿತಗೊಳಿಸಲು 1/3 ತೊಲ ಬೆಳ್ಳಿಯನ್ನು ದರವಾಗಿ ತೆಗೆದುಕೊಳ್ಳುತ್ತಿದ್ದರು; ಸಲಿಕೆಯನ್ನಾಗಲಿ ಕೊಡಲಿಯನ್ನಾಗಲಿ ನೇಗಿಲಿನ ಗುಳವನ್ನಾಗಲಿ ಹರಿತಗೊಳಿಸಲು 1/6 ತೊಲ ಬೆಳ್ಳಿಯನ್ನು ತೆಗೆದುಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು