1 ಸಮುಯೇಲ 13:3 - ಪರಿಶುದ್ದ ಬೈಬಲ್3 ಯೋನಾತಾನನು ಫಿಲಿಷ್ಟಿಯರನ್ನು ಅವರ ಶಿಬಿರವಿದ್ದ ಗೆಬದಲ್ಲಿ ಸೋಲಿಸಿದನು. ಫಿಲಿಷ್ಟಿಯರು ಈ ವಿಚಾರವನ್ನು ಕೇಳಿ, “ಇಬ್ರಿಯರು ದಂಗೆ ಎದ್ದಿದ್ದಾರೆ” ಎಂದು ಹೇಳಿದರು. ಸೌಲನು, “ಏನು ನಡೆಯಿತೆಂಬುದು ಇಬ್ರಿಯರಿಗೆ ತಿಳಿಯಲಿ” ಎಂದು ಹೇಳಿದನು. ಆದ್ದರಿಂದ ಸೌಲನು ಇಸ್ರೇಲ್ ದೇಶದಲ್ಲೆಲ್ಲಾ ಕೊಂಬೂದಿಸಬೇಕೆಂದು ಜನರಿಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಸೌಲನು “ಎಲ್ಲಾ ಇಬ್ರಿಯರು ಕೇಳಲಿ” ಎಂದು ದೇಶದಲ್ಲೆಲ್ಲಾ ತುತ್ತೂರಿ ಊದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬೇರೆ ಇಸ್ರಾಯೇಲ್ಯರನ್ನು ಅವರವರ ಮನೆಗಳಿಗೆ ಕಳುಹಿಸಿದನು. ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ಠಾಣವನ್ನು ನಾಶಮಾಡಿದನು. ಈ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿತು. ಈ ಸಂಗತಿಯು ಎಲ್ಲಾ ಇಬ್ರಿಯರಿಗೂ ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಜೆರುಸಲೇಮಿನ ಸುತ್ತಮುತ್ತ ಇರುವ ಜಾಗವು ನಿರ್ಜನವಾಗಿದ್ದು ಅರಾಬಾ ಮರುಭೂಮಿಯಂತಿರುವದು. ದೇಶವು ಗೆಬದಿಂದ ಹಿಡಿದು ನೆಗೆವ್‌ನಲ್ಲಿರುವ ರಿಮ್ಮೋನ್ ತನಕ ಮರುಭೂಮಿಯಂತಿರುವದು. ಆದರೆ ಜೆರುಸಲೇಮ್ ನಗರವು ತಿರುಗಿ ಕಟ್ಟಲ್ಪಡುವದು. ಬೆನ್ಯಾಮೀನ್ ದ್ವಾರದಿಂದ ಮೂಲೇ ದ್ವಾರ ಅಥವಾ ಮೊದಲನೇ ದ್ವಾರದ ತನಕ ಮತ್ತು ಹನನೇಲ್ ಬುರುಜಿನಿಂದ ಹಿಡಿದು ಅರಸನ ದ್ರಾಕ್ಷಿತೊಟ್ಟಿಯ ತನಕ ಹೊಸದಾಗಿ ಕಟ್ಟಲ್ಪಡುವದು.