Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:5 - ಪರಿಶುದ್ದ ಬೈಬಲ್‌

5 ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಒಟ್ಟುಗೂಡಿದರು. ಫಿಲಿಷ್ಟಿಯರಲ್ಲಿ ಮೂರು ಸಾವಿರ ರಥಗಳಿದ್ದವು; ಆರು ಸಾವಿರ ಅಶ್ವಸೈನಿಕರಿದ್ದರು. ಫಿಲಿಷ್ಟಿಯರಲ್ಲಿ ನದಿದಂಡೆಯ ಮರಳಿನ ಕಣಗಳಷ್ಟು ಯೋಧರಿದ್ದರು. ಫಿಲಿಷ್ಟಿಯರು ಬೇತಾವೆನಿನ ಪೂರ್ವ ದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ, ಆರು ಸಾವಿರ ಅಶ್ವಬಲವನ್ನೂ, ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲಾಳುಗಳನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಫಿಲಿಷ್ಟಿಯರು ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಮೂವತ್ತು ಸಾವಿರ ರಥಬಲವನ್ನೂ ಆರು ಸಾವಿರ ಅಶ್ವಬಲವನ್ನೂ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಕಾಲ್ಬಲವನ್ನೂ ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ವಿುಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:5
21 ತಿಳಿವುಗಳ ಹೋಲಿಕೆ  

ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.


ಹೀಗಾಗಿ ಈ ಎಲ್ಲ ಅರಸರ ಸೈನ್ಯಗಳು ಒಟ್ಟುಗೂಡಿದವು. ಈ ಮಹಾಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಆ ಸೈನ್ಯದಲ್ಲಿರುವಂತೆ ಕಾಣುತ್ತಿತ್ತು.


ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು


ಸಮಾರ್ಯದ ಜನರು ಬೇತಾವೆನಿನಲ್ಲಿ ಬಸವನನ್ನು ಆರಾಧಿಸುತ್ತಾರೆ. ಆ ಜನರು ನಿಜವಾಗಿಯೂ ಅಳುವರು. ಅವರ ಪೂಜಾರಿಗಳೂ ಅಳುವರು, ಯಾಕೆಂದರೆ ಅವರ ಸುಂದರವಾದ ವಿಗ್ರಹವು ಇಲ್ಲವಾಗುವದು. ಅದು ಒಯ್ಯಲ್ಪಡುವುದು.


“ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.


“ಇಸ್ರೇಲೇ, ನೀನು ಸೂಳೆಯಂತೆ ವರ್ತಿಸುತ್ತೀ. ಆದರೆ ಯೆಹೂದವನ್ನು ತಪ್ಪಿತಸ್ಥಳನ್ನಾಗಿ ಮಾಡಬೇಡ. ಗಿಲ್ಗಾಲಿಗಾಗಲಿ ಬೇತಾವೆನಿಗಾಗಲಿ ಹೋಗದಿರು. ಯೆಹೋವನ ಮೇಲೆ ಆಣೆ ಇಡಬೇಡ. ‘ಯೆಹೋವನಾಣೆ’ ಎಂದು ಹೇಳಬೇಡ.


ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು.


ನೀವು ನನಗೆ ವಿಧೇಯರಾಗಿದ್ದರೆ, ನಿಮ್ಮ ಸಂತಾನವು ಅಭಿವೃದ್ಧಿಯಾಗುತ್ತಿತ್ತು. ಅವರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿರುತ್ತಿದ್ದರು. ನೀವು ನನಗೆ ವಿಧೇಯರಾಗಿದ್ದರೆ, ನೀವು ನಾಶವಾಗಿರುತ್ತಿರಲಿಲ್ಲ ಮತ್ತು ನನ್ನೆದುರಿನಿಂದ ನಿಮ್ಮ ಹೆಸರು ತೆಗೆದುಹಾಕಲ್ಪಡುತ್ತಿರಲಿಲ್ಲ.”


ದೇವರಾದ ಯೆಹೋವನೇ ನೀನು ನನ್ನ ತಂದೆಯಾದ ದಾವೀದನಿಗೆ ಮಾಡಿರುವ ವಾಗ್ದಾನವನ್ನು ನೆರವೇರಿಸು. ಒಂದು ದೊಡ್ಡ ರಾಜ್ಯಕ್ಕೆ ನನ್ನನ್ನು ಅರಸನನ್ನಾಗಿ ನೇಮಿಸಿರುತ್ತೀ. ಅದರಲ್ಲಿ ಭೂಮಿಯ ಧೂಳಿನೋಪಾದಿಯಲ್ಲಿ ಜನರು ತುಂಬಿದ್ದಾರೆ.


ಮಿದ್ಯಾನ್ಯರು, ಅಮಾಲೇಕ್ಯರು ಮತ್ತು ಪೂರ್ವದೇಶದ ಉಳಿದೆಲ್ಲ ಜನರು ಆ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದರು. ಅವರು ಅಸಂಖ್ಯಾತವಾಗಿದ್ದು ಮಿಡತೆಯ ಗುಂಪಿನಂತೆ ಕಂಡರು. ಅವರಲ್ಲಿದ್ದ ಒಂಟೆಗಳೋ ಲೆಕ್ಕವಿಲ್ಲದ ಸಮುದ್ರ ತೀರದ ಮರಳಿನಂತೆ ಎದ್ದುಕಾಣುತ್ತಿದ್ದವು.


ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು “ಆಯಿ” ಎಂಬ ಪಟ್ಟಣಕ್ಕೆ ಕಳುಹಿಸಿದನು. “ಆಯಿ” ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು “‘ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು.


ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.


ಇದಲ್ಲದೆ ಯೆಶಾಯನು ಇಸ್ರೇಲಿನ ಬಗ್ಗೆ ಕೂಗಿ ಹೇಳಿದ್ದಾನೆ: “ಸಮುದ್ರ ತೀರದ ಮರಳಿನಂತೆ ಇಸ್ರೇಲರು ಅಸಂಖ್ಯಾತವಾಗಿರುವರು. ಆದರೆ ಆ ಜನರಲ್ಲಿ ಕೆಲವರು ಮಾತ್ರ ರಕ್ಷಣೆ ಹೊಂದುವರು.


ಫಿಲಿಷ್ಟಿಯರು ಸೋತುಹೋದರು. ಅವರು ಮತ್ತೆ ಇಸ್ರೇಲರ ಭೂಮಿಯಲ್ಲಿ ಹೆಜ್ಜೆ ಇಡಲಿಲ್ಲ. ಸಮುವೇಲನ ಜೀವಿತದ ಉಳಿದ ಭಾಗದಲ್ಲಿ ಯೆಹೋವನು ಫಿಲಿಷ್ಟಿಯರಿಗೆ ವಿರುದ್ಧವಾಗಿದ್ದನು.


ಅವನು ಮೂರು ಸಾವಿರ ಇಸ್ರೇಲ್ ಗಂಡಸರನ್ನು ಆರಿಸಿಕೊಂಡನು. ಅವರಲ್ಲಿ ಎರಡು ಸಾವಿರ ಗಂಡಸರು ಗುಡ್ಡಗಾಡು ಪ್ರದೇಶವಾದ ಬೇತೇಲಿನಲ್ಲಿಯೂ ಮಿಕ್ಮಾಷಿನಲ್ಲಿಯೂ ಅವನೊಂದಿಗೆ ಇದ್ದರು. ಉಳಿದ ಒಂದು ಸಾವಿರ ಗಂಡಸರು ಬೆನ್ಯಾಮೀನನ ಗಿಬೆಯದಲ್ಲಿ ಯೋನಾತಾನನೊಂದಿಗೆ ಇದ್ದರು. ಸೌಲನು ಸೈನ್ಯದಲ್ಲಿದ್ದ ಇತರರನ್ನು ಅವರವರ ಮನೆಗಳಿಗೆ ಮರಳಿ ಕಳುಹಿಸಿದನು.


ಸಮುವೇಲನು, “ನೀನು ಮಾಡಿದ್ದೇನು?” ಎಂದು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟುಹೋಗುತ್ತಿರುವುದನ್ನೂ ನೀನು ನಿಯಮಿತಕಾಲದಲ್ಲಿ ಇಲ್ಲಿ ಇಲ್ಲದಿರುವುದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಒಟ್ಟುಗೂಡುತ್ತಿರುವುದನ್ನೂ ನೋಡಿದೆನು.


ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಯುದ್ಧಕ್ಕಾಗಿ ಯೆಹೂದದೇಶದ ಸೋಕೋವಿನಲ್ಲಿ ಒಟ್ಟುಗೂಡಿಸಿದರು. ಅವರು ಸೋಕೋವಿಗೂ ಅಜೇಕಕ್ಕೂ ಮಧ್ಯದಲ್ಲಿರುವ ಎಫೆಸ್ದಮ್ಮೀಮ್ ಎಂಬ ಹೆಸರಿನ ಪಟ್ಟಣದಲ್ಲಿ ಪಾಳೆಯಮಾಡಿಕೊಂಡರು.


“ನನ್ನ ಸಲಹೆ ಹೀಗಿದೆ: ನೀನು ದಾನ್‌ನಿಂದ ಬೇರ್ಷೆಬದವರೆಗಿನ ಇಸ್ರೇಲರನ್ನೆಲ್ಲ ಒಟ್ಟುಗೂಡಿಸು. ಆಗ ಸಮುದ್ರ ತೀರದ ಮರಳಿನ ಕಣಗಳಂತೆ ಅಲ್ಲಿ ಅನೇಕ ಜನರಿರುತ್ತಾರೆ. ನೀನೇ ಸ್ವತಃ ಯುದ್ಧರಂಗಕ್ಕೆ ಹೋಗಬೇಕು.


ಇಸ್ರೇಲರೂ ಯುದ್ಧಕ್ಕೆ ಸಿದ್ಧರಾದರು. ಇಸ್ರೇಲಿನ ಜನರು ಅರಾಮ್ಯದ ಸೇನೆಯೊಡನೆ ಹೋರಾಡಲು ಹೋದರು. ಅವರು ಅರಾಮ್ಯದ ಪಾಳೆಯಕ್ಕೆ ಎದುರಾಗಿ ತಮ್ಮ ಪಾಳೆಯ ಮಾಡಿಕೊಂಡರು. ಶತ್ರುಗಳಿಗೆ ಹೋಲಿಸಿದರೆ ಇಸ್ರೇಲರು ಆಡುಗಳ ಎರಡು ಚಿಕ್ಕಮಂದೆಯಂತೆ ಕಾಣುತ್ತಿದ್ದರು. ಆದರೆ ಅರಾಮ್ಯದ ಸೈನಿಕರು ಎಲ್ಲಾ ಪ್ರದೇಶವನ್ನು ವ್ಯಾಪಿಸಿದ್ದರು.


ಸೈನಿಕರು ಅಯ್ಯಾಥಿನ ಮೇಲೆ ಬಂದಿದ್ದಾರೆ; ಮಿಗ್ರೋನನ್ನು ಹಾದುಹೋಗಿದ್ದಾರೆ. ಮಿಕ್ಮಾಷಿನಲ್ಲಿ ತಮ್ಮ ಉಪಕರಣಗಳನ್ನಿಟ್ಟಿರುತ್ತಾರೆ.


ಸೌಲನು ತನ್ನ ಜೀವಮಾನವೆಲ್ಲ ಶೌರ್ಯದಿಂದ ಫಿಲಿಷ್ಟಿಯರ ವಿರುದ್ಧ ತೀವ್ರವಾಗಿ ಹೋರಾಡಿದನು. ಸೌಲನು ವೀರನನ್ನಾಗಲಿ ಧೈರ್ಯಶಾಲಿಯನ್ನಾಗಲಿ ಯಾವಾಗಲಾದರೂ ನೋಡಿದರೆ, ಅಂತಹವರನ್ನು ಸೈನ್ಯಕ್ಕೆ ತೆಗೆದುಕೊಂಡು, ಅವರನ್ನು ರಾಜನ ಅಂಗರಕ್ಷಕ ಪಡೆಗೆ ಸೇರಿಸಿಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು