Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 13:6 - ಪರಿಶುದ್ದ ಬೈಬಲ್‌

6 ಇಸ್ರೇಲರು ತಾವು ತೊಂದರೆಗೆ ಒಳಗಾಗಿರುವುದನ್ನೂ ಇಕ್ಕಟ್ಟಿನಲ್ಲಿ ಸಿಕ್ಕಿಬಿದ್ದಿರುವುದನ್ನೂ ತಿಳಿದುಕೊಂಡರು. ಅವರು ಗವಿಗಳಲ್ಲಿ ಮತ್ತು ಬಂಡೆಗಲ್ಲುಗಳ ಸಂಧಿಗಳಲ್ಲಿ ಅಡಗಿಕೊಳ್ಳಲು ಓಡಿಹೋದರು. ಅವರು ಬಂಡೆಗಳ ಮಧ್ಯದಲ್ಲಿಯೂ ಬಾವಿಗಳಲ್ಲಿಯೂ ಮತ್ತು ನೆಲದ ಕುಳಿಗಳಲ್ಲಿಯೂ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 13:6
18 ತಿಳಿವುಗಳ ಹೋಲಿಕೆ  

ಮಿದ್ಯಾನ್ಯರು ಬಹಳ ಬಲಶಾಲಿಗಳಾಗಿದ್ದು ಇಸ್ರೇಲರಿಗೆ ಕ್ರೂರಿಗಳಾಗಿದ್ದರು. ಆದ್ದರಿಂದ ಇಸ್ರೇಲರು ಅಡಗಿಕೊಳ್ಳುವುದಕ್ಕಾಗಿ ಬೆಟ್ಟಗಳಲ್ಲಿ ಸ್ಥಳಗಳನ್ನು ಮಾಡಿಕೊಂಡರು. ಕಂಡುಹಿಡಿಯಲಾಗದ ಸ್ಥಳಗಳಲ್ಲಿ ಅವರು ತಮ್ಮ ಆಹಾರವನ್ನು ಬಚ್ಚಿಡುತ್ತಿದ್ದರು.


ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.


ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು.


ಆದರೆ, ಜನರನ್ನು ನೋಡಿರಿ. ಅವರನ್ನು ಬೇರೆಯವರು ಸೋಲಿಸಿದ್ದಾರೆ. ಅವರಿಂದ ವಸ್ತುಗಳನ್ನು ದೋಚಿದ್ದಾರೆ. ತರುಣರೆಲ್ಲರೂ ಭಯಪಟ್ಟಿದ್ದಾರೆ; ಅವರನ್ನು ಸೆರೆಮನೆಯಲ್ಲಿ ಬಂಧಿಸಿದ್ದಾರೆ. ಅವರಿಂದ ಹಣವನ್ನು ಜನರು ಕಿತ್ತುಕೊಂಡಿದ್ದಾರೆ. ಅವರನ್ನು ರಕ್ಷಿಸಲು ಯಾರೂ ಇಲ್ಲ. ಅವರಲ್ಲಿ ಹಣವನ್ನು “ಹಿಂದಕ್ಕೆ ಕೊಡು” ಎಂದು ಹೇಳುವವರೇ ಇಲ್ಲ.


ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.


ಸೌಲನು ರಸ್ತೆಯ ಪಕ್ಕದ ಕುರಿದೊಡ್ಡಿಗೆ ಬಂದನು. ಅಲ್ಲಿಗೆ ಸಮೀಪದಲ್ಲಿ ಒಂದು ಗವಿಯಿದ್ದಿತು. ಸೌಲನು ಶೌಚಕ್ಕೋಸ್ಕರ ಗವಿಯ ಒಳಗಡೆಗೆ ಹೋದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂದಗಡೆ ಅಡಗಿಕೊಂಡಿದ್ದರು.


ಜೀಫಿನ ಜನರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪ್ರಾಂತ್ಯದಲ್ಲಿ ಅಡಗಿಕೊಂಡಿದ್ದಾನೆ. ಅವನು ಹೋರೆಷಿನ ಕೋಟೆಯಲ್ಲಿದ್ದಾನೆ. ಅವನು ಜೆಸಿಮೋನಿನ ದಕ್ಷಿಣಕ್ಕಿರುವ ಹಕೀಲಾ ಬೆಟ್ಟದ ಮೇಲಿದ್ದಾನೆ.


ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು.


ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳ ಜನರೊಡನೆ ಯುದ್ಧ ಮಾಡಿದರು. ಅಮ್ಮೋನಿಯರು, ಇಸ್ರೇಲರಿಗೆ ಅನೇಕ ಕಷ್ಟಗಳನ್ನು ಕೊಟ್ಟರು.


“ಆಯಿ”ಯ ಜನರು ಹಿಂತಿರುಗಿ ನೋಡಿದಾಗ ತಮ್ಮ ಪಟ್ಟಣ ಉರಿಯುತ್ತಿರುವುದನ್ನೂ ಹೊಗೆಯು ಆಕಾಶಕ್ಕೆ ಏರುತ್ತಿರುವುದನ್ನೂ ಕಂಡು ತಮ್ಮ ಶಕ್ತಿಯನ್ನೂ ಧೈರ್ಯವನ್ನೂ ಕಳೆದುಕೊಂಡರು. ಅವರು ಇಸ್ರೇಲಿನ ಜನರ ಬೆನ್ನಟ್ಟುವುದನ್ನು ಬಿಟ್ಟರು. ಇಸ್ರೇಲಿನ ಜನರು ಓಡಿಹೋಗುವುದನ್ನು ನಿಲ್ಲಿಸಿ “ಆಯಿ”ಯ ಜನರೊಂದಿಗೆ ಹೋರಾಡತೊಡಗಿದರು. “ಆಯಿ”ಯ ಜನರಿಗೆ ಓಡಿಹೋಗಲು ಸುರಕ್ಷಿತವಾದ ಯಾವ ಸ್ಥಳವೂ ಇರಲಿಲ್ಲ.


ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿರುವುದು ಫಿಲಿಷ್ಟಿಯರಿಗೆ ಗೊತ್ತಾಯಿತು. ಫಿಲಿಷ್ಟಿಯ ಅಧಿಪತಿಗಳು ಇಸ್ರೇಲರ ವಿರುದ್ಧ ಹೋರಾಡಲು ಹೊರಟರು. ಫಿಲಿಷ್ಟಿಯರು ಬರುತ್ತಿರುವುದನ್ನು ಕೇಳಿ ಇಸ್ರೇಲರು ಭಯಗೊಂಡರು.


ನಂತರ ಸಮುವೇಲನು ಎದ್ದು ಗಿಲ್ಗಾಲನ್ನು ಬಿಟ್ಟುಹೊರಟನು. ಸೌಲನು ತನ್ನ ಸೈನ್ಯಸಮೇತವಾಗಿ ಗಿಲ್ಗಾಲಿನಿಂದ ಹೊರಟನು. ಅವರು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯಕ್ಕೆ ಹೋದರು. ಸೌಲನು ತನ್ನೊಂದಿಗೆ ಇನ್ನೂ ಇದ್ದ ಜನರನ್ನು ಲೆಕ್ಕ ಹಾಕಿದನು. ಅವನ ಜೊತೆಯಲ್ಲಿ ಆರುನೂರು ಜನರಿದ್ದರು.


ಫಿಲಿಷ್ಟಿಯ ಸೈನಿಕರು ಓಡಿಹೋಗುತ್ತಿರುವುದನ್ನು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅಡಗಿಕೊಂಡಿದ್ದ ಎಲ್ಲ ಇಸ್ರೇಲರೂ ಕೇಳಿದರು. ಆದ್ದರಿಂದ ಆ ಇಸ್ರೇಲರೂ ಯುದ್ಧದಲ್ಲಿ ಭಾಗಿಗಳಾಗಿ ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋದರು.


ಇಷ್ಮಾಯೇಲನು ಶವಗಳನ್ನು ಆ ಬಾವಿಯೊಳಗೆ ಹಾಕಿದನು. ಆ ಬಾವಿಯು ಬಹಳ ದೊಡ್ಡದಾಗಿತ್ತು. ಅದನ್ನು ಯೆಹೂದದ ರಾಜನಾದ ಆಸನು ತೋಡಿಸಿದ್ದನು. ಯುದ್ಧದ ಸಮಯದಲ್ಲಿ ನಗರದಲ್ಲಿ ನೀರು ಸಾಕಷ್ಟು ಇರಬೇಕೆಂಬ ಉದ್ದೇಶದಿಂದ ರಾಜನಾದ ಆಸನು ಈ ಬಾವಿಯನ್ನು ತೋಡಿಸಿದ್ದನು. ರಾಜನಾದ ಆಸನು ತನ್ನ ನಗರವನ್ನು ಇಸ್ರೇಲಿನ ರಾಜನಾದ ಬಾಷನಿಂದ ರಕ್ಷಿಸುವುದಕ್ಕಾಗಿ ಇದನ್ನು ಕಟ್ಟಿಸಿದ್ದನು.


“‘ನೀನು ಅವರಿಗೆ ನಿಮ್ಮ ಒಡೆಯನಾದ ಯೆಹೋವನು ಹೀಗೆ ಹೇಳಿದನೆಂದು ತಿಳಿಸಬೇಕು, “ನನ್ನ ಜೀವದಾಣೆ, ಕೆಡವಲ್ಪಟ್ಟ ಪಟ್ಟಣಗಳಲ್ಲಿ ವಾಸಿಸುವ ಜನರು ಕೊಲ್ಲಲ್ಪಡುವರು. ಯಾರಾದರೂ ಪಟ್ಟಣದ ಹೊರಗೆ ಹೋಗಿದ್ದಲ್ಲಿ ಅವರನ್ನು ಕಾಡುಪ್ರಾಣಿಗಳು ತಿನ್ನುವಂತೆ ಮಾಡುವೆನು. ಯಾರಾದರೂ ಕೋಟೆಯೊಳಗಾಗಲಿ ಗುಹೆಯೊಳಗಾಗಲಿ ಸೇರಿಕೊಂಡರೆ ಅವರು ರೋಗದಿಂದ ಸಾಯುವರು.


ಇಸ್ರೇಲರ ಸೈನ್ಯವು ಓಡಿಹೋಗುತ್ತಿರುವುದನ್ನು ಕಣಿವೆಯ ಮತ್ತೊಂದು ಪಕ್ಕದಲ್ಲಿ ವಾಸಮಾಡುತ್ತಿದ್ದ ಇಸ್ರೇಲರು ನೋಡಿದರು. ಸೌಲನು ಮತ್ತು ಅವನ ಮಕ್ಕಳು ಸತ್ತದ್ದನ್ನೂ ಅವರು ನೋಡಿದರು. ಆದ್ದರಿಂದ ಆ ಇಸ್ರೇಲರು ತಮ್ಮ ನಗರಗಳನ್ನು ಬಿಟ್ಟು ಓಡಿಹೋದರು. ನಂತರ ಫಿಲಿಷ್ಟಿಯರು ಬಂದು ಆ ನಗರಗಳನ್ನು ವಶಪಡಿಸಿಕೊಂಡು ನೆಲೆಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು