1 ಸಮುಯೇಲ 13:7 - ಪರಿಶುದ್ದ ಬೈಬಲ್7 ಇಬ್ರಿಯರಲ್ಲಿ ಕೆಲವರು ಜೋರ್ಡನ್ ನದಿಯನ್ನು ದಾಟಿ ಗಾದ್ ಮತ್ತು ಗಿಲ್ಯಾದ್ ಪ್ರದೇಶಕ್ಕೆ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸೈನ್ಯದಲ್ಲಿದ್ದ ಜನರೆಲ್ಲ ಭಯದಿಂದ ನಡುಗತೊಡಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ, ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತ ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಕೆಲವರು ಯೊರ್ದನ್ ಹೊಳೆದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತಕ್ಕೂ ಹೊರಟು ಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇದಲ್ಲದೆ ಹಿಬ್ರಿಯರಲ್ಲಿ ಕೆಲವರು ಯೊರ್ದನನ್ನು ದಾಟಿ, ಗಾದ್ ದೇಶಕ್ಕೂ, ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು. ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು. ಅಧ್ಯಾಯವನ್ನು ನೋಡಿ |
“ನಾವು ಗೆದ್ದುಕೊಂಡಿದ್ದ ಆ ದೇಶಗಳನ್ನು ನಮ್ಮದಾಗಿ ಮಾಡಿಕೊಂಡೆವು. ಇದರ ಒಂದು ಭಾಗವನ್ನು ನಾನು ರೂಬೇನ್ ಮತ್ತು ಗಾದ್ ಕುಲದವರಿಗೆ ಹಂಚಿಕೊಟ್ಟೆನು. ಅದು ಅರೋಯೇರ್‌ನಿಂದ ಹಿಡಿದು ಗಿಲ್ಯಾದ್ ಪ್ರದೇಶದವರೆಗೆ ಅಂದರೆ ಅರ್ನೋನ್ ಕಣಿವೆಯಲ್ಲಿರುವ ಅರೋಯೇರ್‌ನಿಂದ ಮೊದಲುಗೊಂಡು ಗಿಲ್ಯಾದ್ ಬೆಟ್ಟಪ್ರದೇಶದವರೆಗೂ ಅದರ ಎಲ್ಲಾ ಪಟ್ಟಣಗಳ ಸಮೇತವಾಗಿ ನಾನು ಕೊಟ್ಟೆನು. ಬೆಟ್ಟಪ್ರದೇಶವಾದ ಗಿಲ್ಯಾದಿನಲ್ಲಿ ಅರ್ಧಭಾಗ ಅವರಿಗೆ ದೊರೆಯಿತು.