Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:10 - ಪರಿಶುದ್ದ ಬೈಬಲ್‌

10 ಆದರೆ ಫಿಲಿಷ್ಟಿಯರು, ‘ನಮ್ಮ ಬಳಿಗೆ ಹತ್ತಿ ಬನ್ನಿ’ ಎಂದರೆ, ನಾವು ಅವರ ಬಳಿಗೆ ಹತ್ತಿ ಹೋಗೋಣ; ಯಾಕೆಂದರೆ ಅದು ದೇವರ ಗುರುತು. ದೇವರು ಅವರನ್ನು ಸೋಲಿಸಲು ನಮಗೆ ಅವಕಾಶ ಕಲ್ಪಿಸಿದ್ದಾನೆ ಎಂಬುದೇ ಅದರ ಅರ್ಥ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿ’ ಎಂದು ಕರೆದರೆ ಸರ್ವೇಶ್ವರ ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾರೆಂಬುದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದರೆ ಅವರು - ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆಂಬದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ,’ ಎಂದು ಹೇಳಿದರೆ ನಾವು ಮೇಲೆ ಹತ್ತಿ ಹೋಗೋಣ. ಏಕೆಂದರೆ ಯೆಹೋವ ದೇವರು ಅವರನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟರೆಂಬುದಕ್ಕೆ ಇದೇ ನಮಗೆ ಗುರುತಾಗಿರುವುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:10
8 ತಿಳಿವುಗಳ ಹೋಲಿಕೆ  

ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.


ಈ ಕಾರ್ಯಗಳು ಸಂಭವಿಸಿದ ಮೇಲೆ, ನೀನು ನಿನ್ನ ನಿರ್ಧಾರದಂತೆ ಮಾಡು. ಯಾಕೆಂದರೆ ದೇವರು ನಿನ್ನೊಂದಿಗಿರುತ್ತಾನೆ.


ಮಿದ್ಯಾನ್ಯರ ಶಿಬಿರದ ಒಳಗಡೆ ಹೋಗಿ ಅವರ ಮಾತುಗಳನ್ನು ಕೇಳಿಸಿಕೋ. ಆಗ ನೀನು ಅವರ ಮೇಲೆ ಧಾಳಿಮಾಡುವುದಕ್ಕೆ ಹೆದರುವುದಿಲ್ಲ” ಎಂದನು. ಗಿದ್ಯೋನನು ಮತ್ತು ಅವನ ಸೇವಕನಾದ ಪುರನು ಇಬ್ಬರೂ ಶತ್ರುಗಳ ಪಾಳೆಯದ ಗಡಿಯವರೆಗೂ ಹೋದರು.


ಆಗ ಗಿದ್ಯೋನನು ದೇವರಿಗೆ, “ಇಸ್ರೇಲಿನ ಜನರನ್ನು ರಕ್ಷಿಸಲು ನೀನು ನನಗೆ ಸಹಾಯ ಮಾಡುವುದಾಗಿ ಹೇಳಿರುವೆ. ಅದಕ್ಕೆ ಸಾಕ್ಷ್ಯವನ್ನು ಈಗ ಒದಗಿಸು.


ಅವರು, ‘ನಾವು ಬರುವ ತನಕ ನೀವು ಅಲ್ಲೇ ನಿಲ್ಲಿ’ ಎಂದು ಹೇಳಿದರೆ, ನಾವು ನಿಂತಲ್ಲೇ ನಿಲ್ಲೋಣ. ನಾವು ಮೇಲೆ ಹತ್ತಿ ಅವರ ಹತ್ತಿರಕ್ಕೆ ಹೋಗುವುದು ಬೇಡ.


ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.


ಯೆಶಾಯನು, “ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ ಅಥವಾ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ? ನಿನಗೆ ಯಾವುದು ಬೇಕಾಗಿದೆ? ಯೆಹೋವನು ತಾನು ಹೇಳಿದ್ದನ್ನು ಮಾಡುತ್ತಾನೆಂಬುದಕ್ಕೆ ಇದೇ ನಿನಗೆ ಗುರುತು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು