1 ಸಮುಯೇಲ 14:11 - ಪರಿಶುದ್ದ ಬೈಬಲ್11 ಹೀಗೆ ಯೋನಾತಾನ ಮತ್ತು ಅವನ ಸಹಾಯಕನು ಫಿಲಿಷ್ಟಿಯರಿಗೆ ಕಾಣಿಸಿಕೊಂಡರು. ಫಿಲಿಷ್ಟಿಯರ ಕಾವಲುಗಾರರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಬರುತ್ತಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಹಿಬ್ರಿಯರು ತಾವು ಅಡಗಿಕೊಂಡಿದ್ದ ಕಿಂಡಿಗಳಿಂದ ಹೊರಗೆ ಬರುತ್ತಲಿದ್ದಾರೆ,” ಎಂದು ತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು - ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ ಎಂದು ತಮ್ಮೊಳಗೆ ಮಾತಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹಾಗೆಯೇ ಅವರಿಬ್ಬರೂ ತಾವು ಫಿಲಿಷ್ಟಿಯರ ಠಾಣ್ಯದವರೆಗೂ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರು, “ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಹಿಬ್ರಿಯರು ಹೊರಟು ಬರುತ್ತಾರೆ,” ಎಂದರು. ಅಧ್ಯಾಯವನ್ನು ನೋಡಿ |