Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:15 - ಪರಿಶುದ್ದ ಬೈಬಲ್‌

15 ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಪಾಳೆಯದಲ್ಲಿದ್ದವರೂ, ಕಾವಲುಗಾರರಾಗಿ ಠಾಣದಲ್ಲಿದ್ದವರೂ, ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ, ಉಳಿದ ಎಲ್ಲಾ ಜನರೂ ಭಯದಿಂದ ಕಳವಳಗೊಂಡರು. ಇದಲ್ಲದೆ ದೇವರು ಭೂಕಂಪವನ್ನು ಉಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದರಿಂದ ಪಾಳೆಯದಲ್ಲಿದ್ದವರೂ ಕಾವಲುಗಾರರಾಗಿ ಠಾಣದಲ್ಲಿದ್ದವರೂ ಸುಲಿಗೆಗೋಸ್ಕರ ಹೊರಗೆ ಹೋಗಿದ್ದವರೂ ಉಳಿದ ಎಲ್ಲಾ ಜನರೂ ಭಯದಿಂದ ನಡುಗಹತ್ತಿದರು. ಇದಲ್ಲದೆ ದೇವರು ಭೂಕಂಪವನ್ನುಂಟುಮಾಡಿದ್ದರಿಂದ ಜನರಲ್ಲಿ ಮಹಾಭೀತಿಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:15
18 ತಿಳಿವುಗಳ ಹೋಲಿಕೆ  

ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಇಸ್ರೇಲರನ್ನು ಶಿಕ್ಷಿಸಲು ಫಿಲಿಷ್ಟಿಯರು ತೀರ್ಮಾನಿಸಿದ್ದರು. ಆದ್ದರಿಂದ ಅವರ ಬಲಿಷ್ಠ ಸೈನ್ಯವು ಆಕ್ರಮಣಕ್ಕಾಗಿ ಆ ಸ್ಥಳವನ್ನು ಬಿಟ್ಟುಹೊರಟಿತು. ಫಿಲಿಷ್ಟಿಯ ಸೈನ್ಯವನ್ನು ಮೂರು ಗುಂಪುಗಳನ್ನಾಗಿ ಮಾಡಲಾಯಿತು. ಒಂದು ಗುಂಪು ಉತ್ತರದಿಕ್ಕಿನ ಒಫ್ರದ ಮಾರ್ಗವಾಗಿ ಶುವಲ್ ದೇಶಕ್ಕೆ ಹೊರಟಿತು.


ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.


ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.


ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.


ನಿಮ್ಮ ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ದವನ್ನೂ ಬಹು ದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಹೆದರಬೇಡಿ. ಅಂತ್ಯವು ಬರುವುದಕ್ಕಿಂತ ಮುಂಚೆ ಇವುಗಳು ಸಂಭವಿಸಲೇಬೇಕು.


ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. ಆದರೆ ದೇವರು ನೀತಿವಂತರೊಂದಿಗಿದ್ದಾನೆ. ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.


ಎಲ್ಲಾ ಕಡೆಗಳಿಂದಲೂ ಅಪಾಯವು ಅವನನ್ನು ಭಯಪಡಿಸುತ್ತದೆ. ಅವನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಭಯವು ಹಿಂಬಾಲಿಸುತ್ತದೆ.


ಫಿಲಿಷ್ಟಿಯರ ಸೈನ್ಯದ ಒಂದು ಗುಂಪು ಮಿಕ್ಮಾಷಿನ ಕಣಿವೆಗೆ ಕಾವಲಾಗಿತ್ತು.


ಗಿದ್ಯೋನನ ಜನರು ನಿಂತಲ್ಲಿಯೇ ನಿಂತುಕೊಂಡರು. ಮಿದ್ಯಾನ್ಯರು ಕೂಗಿಕೊಂಡು ಓಡಿಹೋಗಲು ಆರಂಭಿಸಿದರು.


“ಯೆಹೋವನು ಈ ದೇಶವನ್ನು ನಿಮ್ಮ ಜನರಿಗೆ ಕೊಟ್ಟಿದ್ದಾನೆಂದು ನಾನು ಬಲ್ಲೆ. ನಿಮ್ಮ ವಿಷಯ ಕೇಳಿ ನಮಗೆ ಭಯ ಉಂಟಾಗಿದೆ. ಈ ದೇಶದಲ್ಲಿರುವ ಎಲ್ಲಾ ಜನರು ನಿಮ್ಮಿಂದ ಭಯಭೀತರಾಗಿದ್ದಾರೆ.


ಸಮುವೇಲನು ಕುರಿಮರಿಯನ್ನು ಸಮರ್ಪಿಸುವಾಗ, ಫಿಲಿಷ್ಟಿಯರು ಇಸ್ರೇಲರೊಡನೆ ಹೋರಾಡಲು ಬಂದರು. ಆದರೆ ಯೆಹೋವನು ಫಿಲಿಷ್ಟಿಯರ ಹತ್ತಿರ ದೊಡ್ಡ ಗುಡುಗನ್ನು ಉಂಟುಮಾಡಿದನು. ಗುಡುಗಿನ ಶಬ್ದವು ಫಿಲಿಷ್ಟಿಯರಲ್ಲಿ ಕಳವಳವನ್ನೂ ಭಯವನ್ನೂ ಉಂಟುಮಾಡಿತು. ಅವರ ಸೇನಾಧಿಪತಿಗಳಿಗೆ ಅವರನ್ನು ಹತೋಟಿಯಲ್ಲಿಡಲಾಗಲಿಲ್ಲ. ಆದಕಾರಣ ಇಸ್ರೇಲರು ಫಿಲಿಷ್ಟಿಯರನ್ನು ಯುದ್ಧದಲ್ಲಿ ಸೋಲಿಸಿದರು.


ಎರಡನೆ ಗುಂಪು ಈಶಾನ್ಯ ದಿಕ್ಕಿನ ಮಾರ್ಗವಾಗಿ ಬೇತ್‌ಹೋರೋನಿನ ಕಡೆಗೆ ಹೊರಟಿತು. ಆ ಮೂರನೆಯ ಗುಂಪು ಪೂರ್ವದಿಕ್ಕಿನ ಗಡಿಪ್ರದೇಶದ ಕಡೆಗೆ ಹೊರಟಿತು. ಆ ರಸ್ತೆಯು ಜೆಬೋಯೀಮ್ ಕಣಿವೆಯ ಮರುಭೂಮಿಯ ಕಡೆಗೆ ಹೋಗುತ್ತಿತ್ತು.


ಫಿಲಿಷ್ಟಿಯ ಸೈನಿಕರು ದಿಕ್ಕುಪಾಲಾಗಿ ಚದರಿ ಓಡಿಹೋಗುತ್ತಿರುವುದನ್ನು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯದಲ್ಲಿದ್ದ ಸೌಲನ ಕಾವಲುಗಾರರು ನೋಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು