Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:16 - ಪರಿಶುದ್ದ ಬೈಬಲ್‌

16 ಫಿಲಿಷ್ಟಿಯ ಸೈನಿಕರು ದಿಕ್ಕುಪಾಲಾಗಿ ಚದರಿ ಓಡಿಹೋಗುತ್ತಿರುವುದನ್ನು ಬೆನ್ಯಾಮೀನ್ ಪ್ರಾಂತ್ಯದ ಗಿಬೆಯದಲ್ಲಿದ್ದ ಸೌಲನ ಕಾವಲುಗಾರರು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಹೀಗೆ ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿ ಹೋಗುತ್ತಿರುವದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:16
8 ತಿಳಿವುಗಳ ಹೋಲಿಕೆ  

ದೇವರು ಹೇಳುವುದೇನೆಂದರೆ: “ನಾನು ಈಜಿಪ್ಟಿನ ಜನರಲ್ಲಿ ಒಳಜಗಳವನ್ನು ಹುಟ್ಟಿಸುವೆನು. ಜನರು ತಮ್ಮ ಸಹೋದರರೊಂದಿಗೆ ಜಗಳವಾಡುವರು. ನೆರೆಹೊರೆಯವರು ಪರಸ್ಪರ ಜಗಳವಾಡುವರು. ನಗರವು ನಗರದೊಂದಿಗೆ ಯುದ್ಧ ಮಾಡುವದು. ಒಂದು ರಾಷ್ಟ್ರವು ಇನ್ನೊಂದು ರಾಷ್ಟ್ರದೊಂದಿಗೆ ಯುದ್ಧಮಾಡುವದು.


ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.


ಹರಿದು ಕಾಣದೆಹೋಗುವ ನೀರಿನಂತೆ ಆ ಜನರು ಕಾಣದೆ ಹೋಗಲಿ. ಹಾದಿಯ ಮೇಲಿರುವ ಕಳೆಯಂತೆ ಅವರು ಜಜ್ಜಿಹೋಗಲಿ.


ಸೌಲನು ಸೈನಿಕರನ್ನೆಲ್ಲ ಒಟ್ಟುಗೂಡಿಸಿಕೊಂಡು ಯುದ್ಧಕ್ಕೆ ಹೋದನು. ಫಿಲಿಷ್ಟಿಯ ಸೈನಿಕರಲ್ಲಿ ನಿಜವಾಗಿಯೂ ಗಲಿಬಿಲಿಯುಂಟಾಗಿತ್ತು. ಅವರು ತಮ್ಮತಮ್ಮಲ್ಲಿಯೇ ಕತ್ತಿಗಳಿಂದ ಹೋರಾಡುತ್ತಿದ್ದರು.


ಗಿದ್ಯೋನನ ಮುನ್ನೂರು ಜನರು ತಮ್ಮ ತುತ್ತೂರಿಗಳನ್ನು ಊದಿದ ಕೂಡಲೆ ಮಿದ್ಯಾನ್ಯರು ತಮ್ಮತಮ್ಮಲ್ಲಿಯೇ ಒಬ್ಬರನ್ನೊಬ್ಬರು ಕತ್ತಿಯಿಂದ ಇರಿದು ಕೊಲ್ಲುವಂತೆ ಯೆಹೋವನು ಮಾಡಿದನು. ಶತ್ರುಗಳ ಸೈನ್ಯವು ಚೆರೇರದ ದಾರಿಯಲ್ಲಿರುವ ಬೇತ್‌ಷಿಟ್ಟಿನವರೆಗೂ ಓಡಿಹೋಯಿತು. ಅವರು ಟಬ್ಬಾತಿನ ಬಳಿಯಲ್ಲಿರುವ ಅಬೇಲ್ಮೆಹೋಲಾ ನಗರದವರೆಗೂ ಓಡಿಹೋದರು.


ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.


ಸೌಲನು ತನ್ನೊಡನೆ ಇದ್ದ ಸೈನಿಕರಿಗೆ, “ಪಾಳೆಯದಲ್ಲಿರುವ ಜನರನ್ನು ಲೆಕ್ಕಹಾಕಿ. ಯಾರು ಪಾಳೆಯದಿಂದ ಹೊರಗೆ ಹೋಗಿದ್ದಾರೆ ಎಂಬುದನ್ನು ನಾನು ತಿಳಿಯಬೇಕು” ಎಂದು ಹೇಳಿದನು. ಅವರು ಲೆಕ್ಕಹಾಕಿದಾಗ, ಯೋನಾತಾನನೂ ಅವನ ಸಹಾಯಕನೂ ಹೊರಗೆ ಹೋಗಿರುವುದು ತಿಳಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು