Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:18 - ಪರಿಶುದ್ದ ಬೈಬಲ್‌

18 ಸೌಲನು ಅಹೀಯನಿಗೆ, “ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು. (ಆ ಸಮಯದಲ್ಲಿ ದೇವರ ಪವಿತ್ರ ಪೆಟ್ಟಿಗೆಯು ಇಸ್ರೇಲರೊಂದಿಗೆ ಇತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ಸೌಲನು ಅಹೀಯನಿಗೆ, “ಏಫೋದನ್ನು ತೆಗೆದುಕೊಂಡು ಬಾ” ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:18
13 ತಿಳಿವುಗಳ ಹೋಲಿಕೆ  

ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು.


ಕಿರ್ಯತ್ಯಾರೀಮಿನ ಜನರು ಬಂದು, ಯೆಹೋವನ ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡು ಹೋದರು. ಯೆಹೋವನ ಪೆಟ್ಟಿಗೆಯನ್ನು ಬೆಟ್ಟದ ಮೇಲಿದ್ದ ಅಬೀನಾದಾಬನ ಮನೆಯಲ್ಲಿಟ್ಟರು. ಯೆಹೋವನ ಪೆಟ್ಟಿಗೆಯನ್ನು ಕಾಯುವುದಕ್ಕಾಗಿ ಅಬೀನಾದಾಬನ ಮಗನಾದ ಎಲ್ಲಾಜಾರನನ್ನು ಪ್ರತಿಷ್ಠಿಸಿದರು.


ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ದಾಗೋನನ ಗುಡಿಗೆ ತೆಗೆದುಕೊಂಡು ಹೋಗಿ ದಾಗೋನಿನ ಪಕ್ಕದಲ್ಲಿಟ್ಟರು.


ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.


ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.


ಸೌಲನು ತನ್ನೊಡನೆ ಇದ್ದ ಸೈನಿಕರಿಗೆ, “ಪಾಳೆಯದಲ್ಲಿರುವ ಜನರನ್ನು ಲೆಕ್ಕಹಾಕಿ. ಯಾರು ಪಾಳೆಯದಿಂದ ಹೊರಗೆ ಹೋಗಿದ್ದಾರೆ ಎಂಬುದನ್ನು ನಾನು ತಿಳಿಯಬೇಕು” ಎಂದು ಹೇಳಿದನು. ಅವರು ಲೆಕ್ಕಹಾಕಿದಾಗ, ಯೋನಾತಾನನೂ ಅವನ ಸಹಾಯಕನೂ ಹೊರಗೆ ಹೋಗಿರುವುದು ತಿಳಿಯಿತು.


ಸೌಲನು ತನ್ನ ಸೈನಿಕರಿಗೆ, “ಈ ರಾತ್ರಿಯೇ ಫಿಲಿಷ್ಟಿಯರ ಬೆನ್ನಟ್ಟೋಣ. ಅವರಲ್ಲಿರುವುದನ್ನೆಲ್ಲ ವಶಪಡಿಸಿಕೊಂಡು ಅವರನ್ನೆಲ್ಲ ಕೊಲ್ಲೋಣ” ಎಂದು ಹೇಳಿದನು. ಸೈನಿಕರು, “ನಿನಗೆ ಸರಿಕಂಡದ್ದನ್ನು ಮಾಡು” ಎಂದು ಉತ್ತರಕೊಟ್ಟರು. ಆದರೆ ಯಾಜಕನು, “ದೇವರನ್ನು ಕೇಳೋಣ” ಎಂದು ಹೇಳಿದನು.


ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು