1 ಸಮುಯೇಲ 14:19 - ಪರಿಶುದ್ದ ಬೈಬಲ್19 ಸೌಲನು ಯಾಜಕನಾದ ಅಹೀಯನ ಜೊತೆ ಮಾತನಾಡುತ್ತಿದ್ದನು. ಸೌಲನು ಯೆಹೋವನ ಸಲಹೆಗಾಗಿ ಕಾಯುತ್ತಿದ್ದನು. ಆದರೆ ಫಿಲಿಷ್ಟಿಯರ ಪಾಳೆಯದಲ್ಲಿ ಗದ್ದಲವೂ ಗಲಿಬಿಲಿಯೂ ಹೆಚ್ಚತೊಡಗಿದವು. ಸೌಲನು ತಾಳ್ಮೆಯಿಲ್ಲದಂತಾದನು. ಕೊನೆಯದಾಗಿ ಸೌಲನು ಯಾಜಕನಾದ ಅಹೀಯನಿಗೆ, “ಅಷ್ಟೇ ಸಾಕು, ಕೈಗಳನ್ನು ಕೆಳಗಿಳಿಸಿ ಪ್ರಾರ್ಥನೆಯನ್ನು ನಿಲ್ಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೌಲನು ಯಾಜಕನೊಡನೆ ಮಾತನಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆಗ ಸೌಲನು ಯಾಜಕನಿಗೆ, “ನಿನ್ನ ಕೈಯನ್ನು ತೆಗೆ” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸೌಲನು ಯಾಜಕನೊಡನೆ ಮಾತಾಡುತ್ತಿರುವಷ್ಟರಲ್ಲೆ ಫಿಲಿಷ್ಟಿಯರ ಸೈನ್ಯದ ಗದ್ದಲವು ಹೆಚ್ಚು ಹೆಚ್ಚಾಯಿತು. ಆದುದರಿಂದ ಅವನು ದಾಳಹಾಕುವ ಕೈ ನಿಲ್ಲಿಸೆಂದು ಯಾಜಕನಿಗೆ ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸೌಲನು ಯಾಜಕನೊಡನೆ ಮಾತಾಡುತ್ತಿರುವಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದ ಗದ್ದಲವು ಬಲು ಹೆಚ್ಚಾಯಿತು. ಆದದರಿಂದ ಅವನು ಕೈ ನಿಲ್ಲಿಸೆಂದು ಯಾಜಕನಿಗೆ ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸೌಲನು ಯಾಜಕನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಫಿಲಿಷ್ಟಿಯರ ದಂಡಿನಲ್ಲಿ ಕೋಲಾಹಲವು ಹೆಚ್ಚಾಯಿತು. ಆದ್ದರಿಂದ ಸೌಲನು ಯಾಜಕನಿಗೆ, “ನಿನ್ನ ಕೈ ಹಿಂದೆ ತೆಗೆದುಕೋ,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.