21 ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರೊಡನೆ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಹಿಬ್ರಿಯರು ಸೌಲ ಮತ್ತು, ಯೋನಾತಾನನ ಜೊತೆ ಇರುವ ಇಸ್ರಾಯೇಲರ ಸಂಗಡ ಕೂಡಿಕೊಂಡರು.
ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಬಹಳ ಕೋಪಗೊಂಡು, “ದಾವೀದನನ್ನು ಹಿಂದಕ್ಕೆ ಕಳುಹಿಸು! ನೀನು ಕೊಟ್ಟಿರುವ ನಗರಕ್ಕೆ ದಾವೀದನು ಹಿಂದಿರುಗಿ ಹೋಗಲೇಬೇಕು. ಅವನು ನಮ್ಮೊಡನೆ ಯುದ್ಧಕ್ಕೆ ಬರುವಂತಿಲ್ಲ. ಅವನು ನಮ್ಮ ಜೊತೆಯಲ್ಲಿದ್ದರೆ, ಆಗ ನಮ್ಮ ಪಾಳೆಯದಲ್ಲಿ ಒಬ್ಬ ಶತ್ರುವಿದ್ದಂತಾಗುತ್ತದೆ. ಅವನು ನಮ್ಮ ಜನರನ್ನು ಕೊಲ್ಲುವುದರ ಮೂಲಕ ತನ್ನ ರಾಜನ ಮೆಚ್ಚಿಕೆಯನ್ನು ಗಳಿಸುತ್ತಾನೆ.
ಫಿಲಿಷ್ಟಿಯರೇ, ಧೈರ್ಯದಿಂದಿರಿ! ಶೂರರಂತೆ ಹೋರಾಡಿ! ಇಬ್ರಿಯರು ಪುರಾತನ ಕಾಲದಲ್ಲಿ ನಮಗೆ ಗುಲಾಮರಾಗಿದ್ದರು. ಆದಕಾರಣ ಶೂರರಂತೆ ಹೋರಾಡಿರಿ, ಇಲ್ಲವಾದರೆ ನೀವು ಅವರಿಗೆ ಗುಲಾಮರಾಗುವಿರಿ!” ಎಂದು ಹೇಳಿದರು.