1 ಸಮುಯೇಲ 14:23 - ಪರಿಶುದ್ದ ಬೈಬಲ್23 ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯವರೆಗೂ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹೀಗೆ ಯೆಹೋವ ದೇವರು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದರು. ಆ ಯುದ್ಧವು ಬೇತಾವೆನಿನವರೆಗೂ ನಡೆಯಿತು. ಅಧ್ಯಾಯವನ್ನು ನೋಡಿ |
ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.