1 ಸಮುಯೇಲ 14:24 - ಪರಿಶುದ್ದ ಬೈಬಲ್24 ಆದರೆ ಸೌಲನು ಆ ದಿನ ಮತ್ತೊಂದು ದೊಡ್ಡ ತಪ್ಪನ್ನು ಮಾಡಿದನು. ಇಸ್ರೇಲರು ಬಳಲಿದ್ದರು ಮತ್ತು ಹಸಿದಿದ್ದರು. ಸೌಲನು ಅವರಿಗೆ, “ನಾನು ಶತ್ರುಗಳನ್ನು ಸೋಲಿಸಬೇಕಾಗಿರುವುದರಿಂದ ನಿಮ್ಮಲ್ಲಿ ಸಾಯಂಕಾಲದೊಳಗೆ ಊಟಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟು ಹೇಳಿದ್ದರಿಂದ ಇಸ್ರೇಲಿನ ಯಾವ ಸೈನಿಕನೂ ಊಟಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು. ಅಧ್ಯಾಯವನ್ನು ನೋಡಿ |
ಆದ್ದರಿಂದ ನೀನು ಈ ವಿಶೇಷ ಜಲವನ್ನು ಕುಡಿಯುವಾಗ, ನಿನಗೆ ಹಾನಿಯುಂಟಾಗುವುದು. ನಿನಗೆ ಮಕ್ಕಳಾಗುವುದಿಲ್ಲ. ನೀನು ಬಸುರಾಗಿದ್ದರೆ, ನಿನ್ನ ಮಗು ಸಾಯುವುದು. ಆಗ ನಿನ್ನ ಜನರು ನಿನ್ನನ್ನು ದೂರಮಾಡಿ ನಿನ್ನ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುವರು.’ “ಬಳಿಕ ಯಾಜಕನು ಆ ಸ್ತ್ರೀಗೆ ಪ್ರಮಾಣ ಮಾಡಲು ಹೇಳಬೇಕು. ಅವಳು, ‘ನಾನು ಸುಳ್ಳಾಡಿದ್ದರೆ, ಈ ಕೆಟ್ಟ ಸಂಗತಿಗಳು ನನಗೆ ಸಂಭವಿಸಲಿ’ ಎಂದು ಹೇಳಬೇಕು.
ಸೌಲನು ಅವರಿಗೆ, “ನೀವು ದಾವೀದನ ಬಳಿಗೆ ಹೋಗಿ ಹೇಳಿ: ‘ನೀನು ರಾಜನ ಮಗಳಿಗಾಗಿ ಹಣ ಕೊಡಬೇಕಿಲ್ಲ. ಸೌಲನು ತನ್ನ ಶತ್ರುಗಳ ಮೇಲೆ ಸೇಡನ್ನು ತೀರಿಸಿಕೊಳ್ಳುತ್ತಾನೆ. ಆದ್ದರಿಂದ ಅವನ ಮಗಳನ್ನು ಮದುವೆಯಾಗಲು ಕೊಡಬೇಕಾದ ದಕ್ಷಿಣೆ ಏನೆಂದರೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲುಗಳು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು. ಸೌಲನ ರಹಸ್ಯವಾದ ಉಪಾಯ ಇದಾಗಿದ್ದಿತು. ಫಿಲಿಷ್ಟಿಯರು ದಾವೀದನನ್ನು ಕೊಂದು ಬಿಡಬಹುದೆಂದು ಸೌಲನು ಭಾವಿಸಿದ್ದನು.