1 ಸಮುಯೇಲ 14:33 - ಪರಿಶುದ್ದ ಬೈಬಲ್33 ಒಬ್ಬನು ಸೌಲನಿಗೆ, “ಜನರೆಲ್ಲ ಯೆಹೋವನಿಗೆ ವಿರೋಧವಾಗಿ ಪಾಪ ಮಾಡುತ್ತಿದ್ದಾರೆ. ಅವರು ಮಾಂಸವನ್ನು ರಕ್ತಸಮೇತವಾಗಿ ತಿನ್ನುತ್ತಿದ್ದಾರೆ” ಎಂದು ಹೇಳಿದನು. ಅದಕ್ಕೆ ಸೌಲನು, “ಅದು ಪಾಪವೇ ಹೌದು! ಈಗ ನೀನು ಒಂದು ದೊಡ್ಡ ಕಲ್ಲನ್ನು ಇಲ್ಲಿಗೆ ಉರುಳಿಸಿದ ನಂತರ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ಕೆಲವರು ಸೌಲನಿಗೆ, “ನೋಡು, ಜನರು ರಕ್ತದೊಂದಿಗೆ ಊಟಮಾಡಿ ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡುತ್ತಾರೆ” ಎಂದು ತಿಳಿಸಿದರು. ಸೌಲನು ಅವರಿಗೆ, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲೊಂದನ್ನು ಹೊರಳಿಸಿ ತಂದಿಟ್ಟು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆಗ ಕೆಲವರು ಸೌಲನಿಗೆ, “ನೋಡಿ, ಜನರು ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡುತ್ತಿದ್ದಾರೆ,” ಎಂದು ತಿಳಿಸಿದರು. ಅವನು, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ಒಂದು ದೊಡ್ಡ ಕಲ್ಲನ್ನು ಹೊರಳಿಸಿ ತಂದಿಡಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆಗ ಕೆಲವರು ಸೌಲನಿಗೆ - ನೋಡು, ಜನರು ರಕ್ತವನ್ನು ಭುಜಿಸಿ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡುತ್ತಾರೆ ಎಂದು ತಿಳಿಸಲು ಅವನು ಅವರಿಗೆ - ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ದೊಡ್ಡ ಕಲ್ಲನ್ನು ಹೊರಳಿಸಿ ತಂದಿಟ್ಟು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಅವರು ಸೌಲನಿಗೆ, “ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವುದರಿಂದ, ಯೆಹೋವ ದೇವರಿಗೆ ವಿರೋಧವಾಗಿ ಪಾಪ ಮಾಡುತ್ತಾರೆ,” ಎಂದು ತಿಳಿಸಿದರು. ಅದಕ್ಕವನು, “ನೀವು ನಂಬಿಕೆದ್ರೋಹ ಮಾಡಿದಿರಿ. ಈಗ ಒಂದು ದೊಡ್ಡ ಕಲ್ಲನ್ನು ನನ್ನ ಬಳಿಗೆ ಹೊರಳಿಸಿ ಬಿಡಿರಿ,” ಅಂದನು. ಅಧ್ಯಾಯವನ್ನು ನೋಡಿ |