Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:36 - ಪರಿಶುದ್ದ ಬೈಬಲ್‌

36 ಸೌಲನು ತನ್ನ ಸೈನಿಕರಿಗೆ, “ಈ ರಾತ್ರಿಯೇ ಫಿಲಿಷ್ಟಿಯರ ಬೆನ್ನಟ್ಟೋಣ. ಅವರಲ್ಲಿರುವುದನ್ನೆಲ್ಲ ವಶಪಡಿಸಿಕೊಂಡು ಅವರನ್ನೆಲ್ಲ ಕೊಲ್ಲೋಣ” ಎಂದು ಹೇಳಿದನು. ಸೈನಿಕರು, “ನಿನಗೆ ಸರಿಕಂಡದ್ದನ್ನು ಮಾಡು” ಎಂದು ಉತ್ತರಕೊಟ್ಟರು. ಆದರೆ ಯಾಜಕನು, “ದೇವರನ್ನು ಕೇಳೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಸೌಲನು ತನ್ನ ಸೈನಿಕರನ್ನು, “ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ, ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು, ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ” ಎಂದು ಕರೆದನು. ಅವರು, “ನಿನ್ನ ಇಷ್ಟದಂತೆ ಆಗಲಿ” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಸೌಲನು ತನ್ನ ಸೈನಿಕರನ್ನು, “ಬನ್ನಿ, ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ,” ಎಂದು ಕರೆದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿ; ನಾವು ದೇವರನ್ನು ವಿಚಾರಿಸೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಸೌಲನು ತನ್ನ ಸೈನಿಕರನ್ನು ಬನ್ನಿರಿ; ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ ಎಂದು ಕರೆಯಲು ಅವರು - ನಿನ್ನ ಇಷ್ಟದಂತೆ ಆಗಲಿ ಎಂದು ಹೇಳಿದರು. ಆದರೆ ಯಾಜಕನು - ಇತ್ತ ಬನ್ನಿರಿ; ನಾವು ದೇವರನ್ನು ವಿಚಾರಿಸೋಣ ಅನ್ನಲು ಸೌಲನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಸೌಲನು ಜನರಿಗೆ, “ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿ ಹೋಗಿ, ಉದಯಕಾಲದವರೆಗೆ ಅವರನ್ನು ಸುಲಿದುಕೊಂಡು, ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು,” ಎಂದನು. ಅದಕ್ಕೆ ಜನರು, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ಮಾಡು,” ಎಂದರು. ಆಗ ಯಾಜಕನು, “ದೇವರ ಸನ್ನಿಧಿಗೆ ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:36
14 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.


ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ. ನಾವು ಜೆರುಸಲೇಮಿನ ಭದ್ರವಾದ ರಕ್ಷಣಾಸ್ಥಳಗಳನ್ನು ನಾಶಮಾಡೋಣ.”


ಆಗ ಅವರು ದಿನನಿತ್ಯ ನನ್ನನ್ನು ಆರಾಧಿಸಲು ಬರುವರು. ಜನರು ನನ್ನ ವಿಧಿಗಳನ್ನು ಕಲಿತುಕೊಳ್ಳಲು ಇಷ್ಟಪಡುವರು. ಆಗ ಅವರು ಸರಿಯಾಗಿ ಜೀವಿಸುವ ಜನಾಂಗವಾಗುವರು. ಅವರು ದೇವರ ಒಳ್ಳೆಯ ಆಜ್ಞೆಗಳನ್ನು ಬಿಡದೆ ಅನುಸರಿಸುವರು. ಅವರು ಪಕ್ಷಪಾತವಿಲ್ಲದೆ ನ್ಯಾಯತೀರಿಸಲು ನನ್ನನ್ನು ಕೇಳುವರು. ದೇವರ ನಿರ್ಧಾರವನ್ನು ಕೇಳಲು ಆತನ ಬಳಿಗೆ ಹೋಗಲು ಇಚ್ಛಿಸುವರು.


ನನಗಾದರೋ ದೇವರ ಸಮೀಪದಲ್ಲಿರುವುದೇ ಭಾಗ್ಯವಾಗಿದೆ. ನನ್ನ ಒಡೆಯನಾದ ಯೆಹೋವನನ್ನು ನನ್ನ ಆಶ್ರಯಸ್ಥಾನವನ್ನಾಗಿ ಮಾಡಿಕೊಂಡಿರುವೆ. ದೇವರೇ, ನಿನ್ನ ಎಲ್ಲಾ ಕಾರ್ಯಗಳ ಕುರಿತಾಗಿ ಹೇಳಲು ಬಂದಿರುವೆ.


ಅವರಲ್ಲಿ ಅಹೀಯನೂ ಒಬ್ಬನು. ಶೀಲೋವಿನಲ್ಲಿ ಏಲಿಯು ಯೆಹೋವನ ಯಾಜಕನಾಗಿದ್ದನು. ಏಫೋದನ್ನು ಧರಿಸಿದ್ದ ಅಹೀಯನು ಆಗ ಅಲ್ಲಿ ಯಾಜಕನಾಗಿದ್ದನು. ಅಹೀಯನು ಈಕಾಬೋದನ ಸೋದರನಾದ ಅಹೀಟೂಬನ ಮಗ. ಈಕಾಬೋದನು ಫೀನೆಹಾಸನ ಮಗ. ಫೀನೆಹಾಸನು ಏಲಿಯ ಮಗ. ಯೋನಾತಾನನು ಹೊರಟುಹೋದನೆಂಬುದು ಜನರಿಗೆ ಗೊತ್ತಿರಲಿಲ್ಲ.


ಮಾರನೆಯ ದಿನ ಬೆಳಿಗ್ಗೆ ಸೌಲನು ತನ್ನ ಸೈನ್ಯವನ್ನು ಮೂರು ಗುಂಪುಗಳಾಗಿ ವಿಂಗಡಿಸಿದನು. ಸೌಲನು ಮತ್ತು ಅವನ ಸೈನಿಕರು ಬೆಳಗಿನ ಜಾವದಲ್ಲೇ ಅಮ್ಮೋನಿಯರ ಶಿಬಿರದೊಳಕ್ಕೆ ನುಗ್ಗಿದರು. ಅವರು ಆ ದಿನ ಬೆಳಗಿನ ಜಾವ ಶಿಬಿರ ರಕ್ಷಕರನ್ನು ಬದಲಾಯಿಸುತ್ತಿದ್ದಂತೆಯೇ ಸೌಲನು ಆಕ್ರಮಣ ಮಾಡಿದನು. ಸೌಲನು ಮತ್ತು ಅವನ ಸೈನಿಕರು ನಡುಮಧ್ಯಾಹ್ನದೊಳಗೆ ಅಮ್ಮೋನಿಯರನ್ನು ಸೋಲಿಸಿದರು. ಅಮ್ಮೋನಿಯ ಸೈನಿಕರೆಲ್ಲರೂ ದಿಕ್ಕುಪಾಲಾಗಿ ಓಡಿಹೋದರು; ಅವರು ಒಟ್ಟಾಗಿ ಸೇರಿಬರಲು ಸಾಧ್ಯವಾಗಲಿಲ್ಲ.


ಆ ಪಟ್ಟಣಗಳಲ್ಲಿ ಸಿಕ್ಕಿದ ಎಲ್ಲ ಪದಾರ್ಥಗಳನ್ನು ಮತ್ತು ಎಲ್ಲ ಪಶುಗಳನ್ನು ಇಸ್ರೇಲರು ತಮಗಾಗಿ ಇಟ್ಟುಕೊಂಡರು. ಆದರೆ ಅಲ್ಲಿದ್ದ ಜನರನ್ನೆಲ್ಲ ಕೊಂದರು. ಅವರಲ್ಲಿ ಯಾರನ್ನೂ ಸಜೀವವಾಗಿ ಉಳಿಸಲಿಲ್ಲ.


ಆದರೆ ನೀವು ಅಲ್ಲಿ ನಿಂತುಕೊಳ್ಳಬೇಡಿರಿ; ಶತ್ರುಗಳನ್ನು ಬೆನ್ನಟ್ಟಿ ಅವರ ಮೇಲೆ ಧಾಳಿಮಾಡಿ. ತಮ್ಮ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಲು ಅವರಿಗೆ ಅವಕಾಶಕೊಡಬೇಡಿ. ನಿಮ್ಮ ದೇವರಾದ ಯೆಹೋವನು ನಿಮಗೆ ಅವರ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆ” ಎಂದು ಆಜ್ಞಾಪಿಸಿದನು.


ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.


ಹನ್ನಳ ಗಂಡನಾದ ಎಲ್ಕಾನನು ಅವಳಿಗೆ, “ನಿನಗೆ ಸರಿತೋರಿದಂತೆ ಮಾಡು. ಮಗುವು ಗಟ್ಟಿಯಾದ ಊಟ ಮಾಡುವಷ್ಟು ವಯಸ್ಸಾಗುವ ತನಕ ಮನೆಯಲ್ಲಿಯೇ ಇರು. ನೀನು ಹೇಳಿದ್ದನ್ನು ಯೆಹೋವನು ನೆರವೇರಿಸಲಿ” ಎಂದು ಹೇಳಿದನು. ಆದ್ದರಿಂದ ಹನ್ನಳು ತನ್ನ ಮಗುವು ಗಟ್ಟಿಯಾದ ಆಹಾರವನ್ನು ತಿನ್ನಲು ಆರಂಭಿಸುವ ತನಕ ಆರೈಕೆಮಾಡಿ ಬೆಳೆಸಲು ಮನೆಯಲ್ಲಿಯೇ ಇದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು