1 ಸಮುಯೇಲ 14:37 - ಪರಿಶುದ್ದ ಬೈಬಲ್37 ಆದ್ದರಿಂದ ಸೌಲನು ದೇವರನ್ನು, “ನಾವು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಬೇಕೇ? ನಾವು ಫಿಲಿಷ್ಟಿಯರನ್ನು ಸೋಲಿಸುವಂತೆ ನೀನು ಮಾಡುವಿಯೋ?” ಎಂದು ಕೇಳಿದನು. ಆದರೆ ದೇವರು ಆ ದಿನ ಸೌಲನಿಗೆ ಉತ್ತರಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆಗ ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿಕೊಂಡರೂ ದೇವರು ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೇ? ನೀವು ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ಕೇಳಿಕೊಂಡನು. ಆದರೆ ಸರ್ವೇಶ್ವರ ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಿಕೊಂಡರೂ ಆತನು ಅವನಿಗೆ ಆ ದಿವಸ ಉತ್ತರ ಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು. ಅಧ್ಯಾಯವನ್ನು ನೋಡಿ |
ನಂತರ ರಾಜನಾದ ಅಹಾಬನ ಎದುರಿನಲ್ಲಿ ಮೀಕಾಯೆಹು ನಿಂತುಕೊಂಡನು. ರಾಜನು ಅವನನ್ನು, “ಮೀಕಾಯೆಹುವೇ, ರಾಜನಾದ ಯೆಹೋಷಾಫಾಟನು ಮತ್ತು ನಾನು ನಮ್ಮ ಸೈನ್ಯಗಳನ್ನು ಒಟ್ಟುಗೂಡಿಸಬಹುದೇ? ಅರಾಮ್ಯರ ಸೇನೆಯ ವಿರುದ್ಧ ಹೋರಾಡಲು ರಾಮೋತಿಗೆ ನಾವೀಗ ಹೋಗಬೇಕೇ?” ಎಂದು ಕೇಳಿದನು. ಮೀಕಾಯೆಹು, “ಆಗಲಿ, ಈಗ ನೀವು ಹೋಗಿ, ಅವರ ವಿರುದ್ಧ ಯುದ್ಧಮಾಡಿ. ಯೆಹೋವನು ನಿಮಗೆ ಜಯವನ್ನು ಕೊಡುತ್ತಾನೆ” ಎಂದನು.
ಫೀನೆಹಾಸನು ಅಲ್ಲಿ ದೇವರ ಸೇವೆ ಮಾಡುವ ಯಾಜಕನಾಗಿದ್ದನು. ಫೀನೆಹಾಸನು ಎಲ್ಲಾಜಾರನ ಮಗನಾಗಿದ್ದನು. ಎಲ್ಲಾಜಾರನು ಆರೋನನ ಮಗನಾಗಿದ್ದನು.) ಇಸ್ರೇಲರು, “ಬೆನ್ಯಾಮೀನ್ಯರು ನಮ್ಮ ಬಂಧುಗಳು. ನಾವು ಅವರ ವಿರುದ್ಧ ಯುದ್ಧ ಮಾಡುವುದಕ್ಕೆ ಮತ್ತೆ ಹೋಗಬೇಕೇ? ಅಥವಾ ನಾವು ಯುದ್ಧ ಮಾಡುವುದನ್ನು ನಿಲ್ಲಿಸಿ ಬಿಡಬೇಕೇ?” ಎಂದು ಯೆಹೋವನನ್ನು ಕೇಳಿದರು. “ಹೋಗಿರಿ, ನಾಳೆ ಅವರನ್ನು ಸೋಲಿಸಲು ನಾನು ನಿಮಗೆ ಸಹಾಯ ಮಾಡುತ್ತೇನೆ” ಎಂದು ಯೆಹೋವನು ಉತ್ತರಕೊಟ್ಟನು.