1 ಸಮುಯೇಲ 14:38 - ಪರಿಶುದ್ದ ಬೈಬಲ್38 ಸೌಲನು, “ಎಲ್ಲಾ ನಾಯಕರನ್ನೂ ನನ್ನ ಹತ್ತಿರಕ್ಕೆ ಕರೆದು ತನ್ನಿ. ಈ ದಿನ ಯಾರು ಪಾಪಮಾಡಿದ್ದಾರೆಂಬುದನ್ನು ಗುರುತಿಸೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆಗ ಸೌಲನು ಪ್ರಜೆಗಳ ಮುಖಂಡರಿಗೆ, “ನೀವೆಲ್ಲರೂ ಇಲ್ಲಿ ಬಂದು, ಈ ಹೊತ್ತು ಪಾಪ ಯಾವುದರಿಂದ ಉಂಟಾಯಿತು ಎಂದು ವಿಚಾರಿಸಿ ಗೊತ್ತುಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಆಗ ಸೌಲನು ಜನರ ಮುಖಂಡರಿಗೆ, “ನೀವೆಲ್ಲರೂ ಇಲ್ಲಿಗೆ ಬಂದು, ಈ ದಿನ ಎಲ್ಲಿ ಪಾಪಕೃತ್ಯ ನಡೆದಿದೆ ಎಂದು ವಿಚಾರಿಸಿ ಗುರುತು ಹಚ್ಚಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಆಗ ಸೌಲನು ಪ್ರಜೆಯ ಮುಖಂಡರಿಗೆ - ನೀವೆಲ್ಲರೂ ಇಲ್ಲಿ ಬಂದು ಈ ಹೊತ್ತು ಪಾಪ ಯಾವದರಿಂದುಂಟಾಯಿತೋ ವಿಚಾರಿಸಿ ಗೊತ್ತುಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆಗ ಸೌಲನು, “ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ. ಈ ಹೊತ್ತು ಈ ಪಾಪ ಯಾವುದರಿಂದ ಉಂಟಾಯಿತೆಂದು ತಿಳಿದುಕೊಂಡು ನೋಡಿರಿ. ಅಧ್ಯಾಯವನ್ನು ನೋಡಿ |
ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.