41 ಆಗ ಸೌಲನು, “ಇಸ್ರೇಲಿನ ದೇವರಾದ ಯೆಹೋವನೇ, ನಾನು ನಿನ್ನ ಸೇವಕ. ಈ ದಿನ ನೀನು ನನಗೇಕೆ ಉತ್ತರಿಸಲಿಲ್ಲ? ನಾನಾಗಲಿ ನನ್ನ ಮಗನಾದ ಯೋನಾತಾನನಾಗಲಿ ಇಸ್ರೇಲರಾಗಲಿ ಪಾಪಮಾಡಿದ್ದರೆ ಅದನ್ನು ನಮಗೆ ತಿಳಿಸಿಕೊಡು” ಎಂದು ಪ್ರಾರ್ಥಿಸಿದನು. ಚೀಟುಹಾಕಿದಾಗ ಅದು ಸೌಲನಿಗೂ ಯೋನಾತಾನನಿಗೂ ಬಂದಿತು. ಜನರೆಲ್ಲಾ ಬಿಡುಗಡೆಗೊಂಡರು.
41 ಸೌಲನು ಇಸ್ರಾಯೇಲರ ದೇವರಾದ ಯೆಹೋವ ದೇವರಿಗೆ, “ನೀವು ಪೂರ್ಣ ನಿರ್ಣಯವನ್ನು ದಯಪಾಲಿಸಿರಿ,” ಎಂದು ಹೇಳಿ ಚೀಟು ಹಾಕಿದನು. ಆಗ ಸೌಲನಿಗೂ ಯೋನಾತಾನನಿಗೂ ಚೀಟು ಬಂತು. ಆದರೆ ಜನರು ಪಾರಾದರು.
ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!”
ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.
ಆಗ ಸೌಲನು, “ನೀವು ಈ ಕಡೆ ನಿಲ್ಲಿ. ನಾನು ಮತ್ತು ನನ್ನ ಮಗನಾದ ಯೋನಾತಾನನು ಆ ಕಡೆ ನಿಲ್ಲುತ್ತೇವೆ” ಎಂದು ಇಸ್ರೇಲರಿಗೆಲ್ಲ ಹೇಳಿದನು. ಅವರೆಲ್ಲ “ನಿಮ್ಮ ಇಷ್ಟದಂತಾಗಲಿ, ಸ್ವಾಮಿ” ಎಂದರು.