1 ಸಮುಯೇಲ 14:44 - ಪರಿಶುದ್ದ ಬೈಬಲ್44 ಸೌಲನು, “ನಾನು ನನ್ನ ಆಣೆಯನ್ನು ನೆರವೇರಿಸದಿದ್ದರೆ ಯೆಹೋವನು ಬಹುಶಃ ನನಗೆ ಬಹಳ ಕೆಟ್ಟದ್ದನ್ನು ಮಾಡಬಹುದು. ಯೋನಾತಾನನು ಸಾಯಲೇಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.