Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 14:45 - ಪರಿಶುದ್ದ ಬೈಬಲ್‌

45 ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಜನರು ಅವನಿಗೆ, “ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲರಿಗೆ ಮಹಾ ಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು” ಎಂದು ಹೇಳಿ, ಪ್ರಾಯಶ್ಚಿತ್ತವನ್ನು ಕೊಟ್ಟು, ಅವನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ದೇವರ ಸಹಾಯದಿಂದ ಈ ಹೊತ್ತು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಕೂಡದು; ಯೆಹೋವನಾಣೆ, ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 14:45
22 ತಿಳಿವುಗಳ ಹೋಲಿಕೆ  

ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.


ಆದರೆ ಇವುಗಳಿಂದ ನೀವೇನೂ ನಾಶವಾಗುವುದಿಲ್ಲ.


ಆ ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಈ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.


ಆದ್ದರಿಂದ ಸೊಲೊಮೋನನು, “ಅದೋನೀಯನು ತಾನು ಒಳ್ಳೆಯ ಮನುಷ್ಯನೆಂದು ನಿರೂಪಿಸಿದರೆ ಅವನ ತಲೆಯ ಒಂದು ಕೂದಲಿಗೂ ತೊಂದರೆಯಾಗುವುದಿಲ್ಲವೆಂದು ನಾನು ಪ್ರಮಾಣ ಮಾಡುತ್ತೇನೆ. ಆದರೆ ಅವನೇನಾದರೂ ಕೇಡನ್ನು ಮಾಡಿದರೆ ಸಾಯುವನು” ಎಂದು ಹೇಳಿದನು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ಆದ್ದರಿಂದ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನೀವು ದೇವರಿಂದ ಹೊಂದಿಕೊಂಡ ಕೃಪೆಯು ವ್ಯರ್ಥವಾಗದಂತೆ ನೋಡಿಕೊಳ್ಳಿ.


ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳು ಇವೆ ಎಂಬುದು ಸಹ ದೇವರಿಗೆ ತಿಳಿದಿದೆ.


ಪರಲೋಕದ ಸೈನ್ಯಗಳು ಬಿಳಿ ಕುದುರೆಗಳ ಮೇಲೆ ಆತನನ್ನು ಹಿಂಬಾಲಿಸುತ್ತಿದ್ದವು. ಅವರು ಬಿಳುಪಾಗಿಯೂ ಶುಭ್ರವಾಗಿಯೂ ಇದ್ದ ನಯವಾದ ನಾರಮಡಿಯನ್ನು ಧರಿಸಿದ್ದರು.


ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು.


ಪೌಲನು ಅವರೆಲ್ಲರನ್ನು ವಂದಿಸಿದನು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ಅನೇಕ ಕಾರ್ಯಗಳನ್ನು ಮಾಡುವುದಕ್ಕಾಗಿ ದೇವರು ತನ್ನನ್ನು ಉಪಯೋಗಿಸಿಕೊಂಡ ಬಗೆಯನ್ನೂ ತನ್ನ ಮೂಲಕವಾಗಿ ದೇವರು ಮಾಡಿದ ಎಲ್ಲಾ ಕಾರ್ಯಗಳ ಕುರಿತಾಗಿಯೂ ಅವನು ಅವರಿಗೆ ತಿಳಿಸಿದನು.


ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.


ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ.


ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.


ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.


“ನಾನು ಅವರನ್ನು ಆ ಜನರಿಂದ ಪ್ರತ್ಯೇಕಿಸಿದ್ದೇನೆ; ನಾನೇ ಅವರಿಗೆ ಆಜ್ಞಾಪಿಸುವೆನು. ನಾನು ಕೋಪಗೊಂಡಿರುವುದರಿಂದ ಆ ಜನರನ್ನು ಶಿಕ್ಷಿಸಲು ನನ್ನ ಉತ್ತಮವಾದ ಜನರನ್ನು ಒಟ್ಟಾಗಿ ಸೇರಿಸಿದ್ದೇನೆ. ಉತ್ಸಾಹಶಾಲಿಗಳಾದ ನನ್ನ ಜನರ ಬಗ್ಗೆ ನಾನು ಹೆಮ್ಮೆಪಡುತ್ತೇನೆ.


ಆದ್ದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.


“ಅಮರ್ಯನು ನಿಮ್ಮ ಪ್ರಧಾನಯಾಜಕನು. ಯೆಹೋವನ ಕಾರ್ಯಗಳಿಗೆಲ್ಲಾ ಅವನೇ ನಿಮಗೆ ಪ್ರಮುಖನು. ಯೆಹೋವನ ಕುರಿತಾದ ಸಂಗತಿಗಳ ಬಗ್ಗೆ ಜೆಬದ್ಯನು ಪ್ರಮುಖನಾಗಿರುವನು. ಅವನು ಯೆಹೂದ ಕುಲದ ಇಷ್ಮಾಯೇಲನ ಮಗ. ಲೇವಿಯರು ನಿಮಗಾಗಿ ಬರವಣಿಗೆಯ ಕೆಲಸವನ್ನು ಮಾಡುವರು. ನೀವು ಮಾಡುವ ಕಾರ್ಯಗಳಲ್ಲಿ ಧೈರ್ಯಶಾಲಿಗಳಾಗಿರಿ. ಯೆಹೋವನು ನೀತಿವಂತರೊಂದಿಗಿರುವನು” ಎಂದು ಹೇಳಿದನು.


ದಾವೀದನು ಫಿಲಿಷ್ಟಿಯನಾದ ಗೊಲ್ಯಾತನನ್ನು ಕೊಂದಾಗ ತನ್ನ ಜೀವವನ್ನೇ ಪಣವಾಗಿಟ್ಟಿದ್ದನು. ಯೆಹೋವನು ಇಸ್ರೇಲರೆಲ್ಲರಿಗೂ ಬಹು ದೊಡ್ಡ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿದೆ ಮತ್ತು ಸಂತೋಷಗೊಂಡೆ. ದಾವೀದನಿಗೆ ಕೇಡುಮಾಡಲು ನೀನು ಏಕೆ ಬಯಸಿರುವೆ? ಅವನು ನಿರಪರಾಧಿ. ಅವನನ್ನು ಕೊಲ್ಲಲು ಯಾವ ಕಾರಣವೂ ಇಲ್ಲ!” ಎಂದು ಹೇಳಿದನು.


ಹೀಗೆ ಯೆಹೋವನು ಅಂದು ಇಸ್ರೇಲರನ್ನು ರಕ್ಷಿಸಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು. ಸೌಲನ ಬಳಿ ಒಟ್ಟು ಹತ್ತು ಸಾವಿರ ಮಂದಿ ಸೈನಿಕರಿದ್ದರು. ಎಫ್ರಾಯೀಮ್ ಬೆಟ್ಟಪ್ರದೇಶದ ಎಲ್ಲಾ ನಗರಗಳಿಗೂ ಯುದ್ಧವು ಹಬ್ಬಿತು.


ಸೌಲನು ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಲಿಲ್ಲ. ಫಿಲಿಷ್ಟಿಯರು ತಮ್ಮ ಸ್ವಸ್ಥಳಕ್ಕೆ ಹಿಂದಿರುಗಿದರು.


ಆದರೆ ಸೌಲನು, “ಯೆಹೋವನು ಇಸ್ರೇಲನ್ನು ರಕ್ಷಿಸಿದ್ದಾನೆ. ಈ ದಿನ ಯಾರನ್ನೂ ಕೊಲ್ಲುವುದು ಬೇಡ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು