ಆದರೆ ಸೈನಿಕರು ಸೌಲನಿಗೆ, “ಈ ದಿನ ಇಸ್ರೇಲರನ್ನು ಮುನ್ನಡೆಸಿ ಮಹಾವಿಜಯವನ್ನು ಉಂಟುಮಾಡಿದ ಯೋನಾತಾನನು ಸಾಯಬೇಕೋ? ಇಲ್ಲ! ಜೀವಸ್ವರೂಪನಾದ ಯೆಹೋವನಾಣೆ, ಯೋನಾತಾನನ ತಲೆಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳಲು ನಾವು ಬಿಡುವುದಿಲ್ಲ. ಇಂದು ಫಿಲಿಷ್ಟಿಯರ ವಿರುದ್ಧ ಹೋರಾಡಲು ದೇವರು ಯೋನಾತಾನನಿಗೆ ಸಹಾಯಮಾಡಿದ್ದಾನೆ” ಎಂದು ಹೇಳಿದರು. ಹೀಗೆ ಜನರು ಯೋನಾತಾನನನ್ನು ರಕ್ಷಿಸಿದರು. ಅವನನ್ನು ಸಾಯಿಸಲಿಲ್ಲ.