1 ಸಮುಯೇಲ 14:47 - ಪರಿಶುದ್ದ ಬೈಬಲ್47 ಸೌಲನು ಇಸ್ರೇಲನ್ನು ಪೂರ್ಣವಾಗಿ ಹತೋಟಿಯಲ್ಲಿಟ್ಟುಕೊಂಡು ತಾನು ರಾಜನೆಂಬುದನ್ನು ತೋರಿಸಿಕೊಟ್ಟನು. ಸೌಲನು ಇಸ್ರೇಲಿನ ಸುತ್ತಲೂ ವಾಸಿಸುತ್ತಿದ್ದ ಶತ್ರುಗಳೊಡನೆ ಅಂದರೆ ಮೋವಾಬ್ಯರೊಡನೆ, ಅಮ್ಮೋನಿಯರೊಡನೆ, ಎದೋಮ್ಯರೊಡನೆ, ಚೋಬದ ಅರಸರೊಡನೆ ಮತ್ತು ಫಿಲಿಷ್ಟಿಯರೊಡನೆ ಹೋರಾಡಿದನು. ಸೌಲನು ತಾನು ಹೋದ ಕಡೆಯಲ್ಲೆಲ್ಲಾ ಇಸ್ರೇಲರ ಶತ್ರುಗಳನ್ನು ಸೋಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಸೌಲನು ಇಸ್ರಾಯೇಲ್ಯರಿಗೆ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಅವನು ಹೋದ ಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಸೌಲನು ಇಸ್ರಾಯೇಲ್ಯರ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು. ಅಧ್ಯಾಯವನ್ನು ನೋಡಿ |