1 ಸಮುಯೇಲ 15:11 - ಪರಿಶುದ್ದ ಬೈಬಲ್11 ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವನಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿ |
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.