Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:14 - ಪರಿಶುದ್ದ ಬೈಬಲ್‌

14 ಅದಕ್ಕೆ ಸಮುವೇಲನು, “ಹಾಗಿದ್ದರೆ ನಾನು ಕೇಳುತ್ತಿರುವ ಶಬ್ದವೇನು? ದನಕುರಿಗಳ ಶಬ್ದವು ಕೇಳುತ್ತಿದೆಯಲ್ಲಾ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತಿದೆ, ದನಗಳ ಶಬ್ದವು ನನಗೆ ಕೇಳಿಸುತ್ತಿದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ಸಮುವೇಲನು - ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತದೆ, ದನಗಳ ಶಬ್ದವು ನನಗೆ ಕೇಳಿಸುತ್ತದೆ ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಸಮುಯೇಲನು ಅವನಿಗೆ, “ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:14
11 ತಿಳಿವುಗಳ ಹೋಲಿಕೆ  

ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಧರ್ಮಶಾಸ್ತ್ರದ ಅಧೀನದಲ್ಲಿರುವ ಜನರ ವಿಷಯವಾಗಿಯೇ ಧರ್ಮಶಾಸ್ತ್ರವು ಈ ಸಂಗತಿಯನ್ನು ಹೇಳುತ್ತಿದೆ. ಆದ್ದರಿಂದ ಯೆಹೂದ್ಯರು ನೆವ ಹೇಳಲು ಸಾದ್ಯವಿಲ್ಲ. ಅಲ್ಲದೆ ಇಡೀ ಲೋಕವೇ ದೇವರ ನ್ಯಾಯತೀರ್ಪಿಗೆ ಒಳಗಾಗಿದೆ.


“ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.


ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.


ಮೋಶೆಯು ಆರೋನನಿಗೆ, “ಈ ಜನರು ನಿನಗೇನು ಮಾಡಿದರು? ಇಂಥಾ ಕೆಟ್ಟ ಪಾಪವನ್ನು ಮಾಡುವಂತೆ ಯಾಕೆ ಅವರನ್ನು ನಡಿಸಿದೆ?” ಎಂದು ಹೇಳಿದನು.


ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು