1 ಸಮುಯೇಲ 15:15 - ಪರಿಶುದ್ದ ಬೈಬಲ್15 ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೌಲನು, “ಜನರು ನಿನ್ನ ದೇವರಾದ ಯೆಹೋವನಿಗೆ ಯಜ್ಞವನ್ನು ಅರ್ಪಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಉತ್ತಮವಾದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೌಲನು, “ಜನರು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಸಲ್ಲಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸೌಲನು - ಜನರು ನಿನ್ನ ದೇವರಾದ ಯೆಹೋವನಿಗೋಸ್ಕರ ಯಜ್ಞಸಲ್ಲಿಸುವದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ವಿುಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು. ಅಧ್ಯಾಯವನ್ನು ನೋಡಿ |