Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:2 - ಪರಿಶುದ್ದ ಬೈಬಲ್‌

2 ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಇಸ್ರೇಲರು ಈಜಿಪ್ಟಿನಿಂದ ಹೊರಬಂದಾಗ ಅಮಾಲೇಕ್ಯರು ಅವರನ್ನು ಕಾನಾನಿಗೆ ಹೋಗದಂತೆ ತಡೆಯಲು ಪ್ರಯತ್ನಿಸಿದರು. ಅಮಾಲೇಕ್ಯರು ಮಾಡಿದ್ದನ್ನು ನಾನು ನೋಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸೇನಾಧೀಶ್ವರನಾದ ಯೆಹೋವನು ನಿನಗೆ, ‘ಇಸ್ರಾಯೇಲರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದ್ದನ್ನು ನೆನಪುಮಾಡಿಕೊಂಡು ನಾನು ಅವರಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದರು. ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಸೇನಾಧೀಶ್ವರನಾದ ಯೆಹೋವನು ನಿನಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:2
8 ತಿಳಿವುಗಳ ಹೋಲಿಕೆ  

“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”


ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.


ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.


ತಮ್ಮ ನೆರೆಮನೆಯವರಿಗೂ ತಮ್ಮ ಬಂಧುಬಳಗದವರಿಗೂ ಯಾರೂ ಯೆಹೋವನ ಬಗ್ಗೆ ಹೇಳಿಕೊಡಬೇಕಾಗಿಲ್ಲ. ಯಾಕೆಂದರೆ ಅತಿ ಕನಿಷ್ಠರಿಂದ ಅತಿ ಪ್ರಮುಖರವರೆಗೆ ಎಲ್ಲರೂ ನನ್ನನ್ನು ತಿಳಿದುಕೊಂಡಿರುವರು. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಕ್ಷಮಿಸುವೆನು. ನಾನು ಅವರ ಪಾಪಗಳನ್ನು ಮರೆತುಬಿಡುವೆನು.” ಇದು ಯೆಹೋವನ ನುಡಿ.


ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು