Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:22 - ಪರಿಶುದ್ದ ಬೈಬಲ್‌

22 ಆದಕ್ಕೆ ಸಮುವೇಲನು, “ಯೆಹೋವನಿಗೆ ಯಾವುದು ಹೆಚ್ಚು ಮೆಚ್ಚಿಗೆಯಾಗಿದೆ? ಸರ್ವಾಂಗಹೋಮಗಳೇ? ಯಜ್ಞಗಳೇ? ಇಲ್ಲವೆ ಯೆಹೋವನ ಆಜ್ಞೆಗಳಿಗೆ ವಿಧೇಯರಾಗುವುದೇ? ದೇವರಿಗೆ ಯಜ್ಞವನ್ನು ಸಮರ್ಪಿಸುವುದಕ್ಕಿಂತ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದೇ ಉತ್ತಮ. ಟಗರುಗಳ ಕೊಬ್ಬನ್ನು ಅರ್ಪಿಸುವುದಕ್ಕಿಂತ ಆತನ ಮಾತುಗಳನ್ನು ಆಲಿಸುವುದು ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:22
24 ತಿಳಿವುಗಳ ಹೋಲಿಕೆ  

ಯಾಕೆಂದರೆ ನನಗೆ ವಿಧೇಯತೆಯಿಂದ ಕೂಡಿದ ಪ್ರೀತಿಯು ಬೇಕೇ ಹೊರತು ಯಜ್ಞವಲ್ಲ. ಜನರು ತರುವ ಸರ್ವಾಂಗಹೋಮಗಳಿಗಿಂತಲೂ ಅವರು ನನ್ನನ್ನು (ದೇವರನ್ನು) ತಿಳಿದುಕೊಳ್ಳಬೇಕೆಂಬುದೇ ನನಗೆ ಇಷ್ಟ.


ಸರಿಯಾದ ಮತ್ತು ನ್ಯಾಯವಾದ ಕಾರ್ಯಗಳನ್ನು ಮಾಡು. ಯೆಹೋವನು ಅವುಗಳನ್ನು ಯಜ್ಞಗಳಿಗಿಂತಲೂ ಹೆಚ್ಚಾಗಿ ಪ್ರೀತಿಸುವನು.


ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ.


‘ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು’ ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ.


“ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.


ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.


ನೀವು ನಿಮ್ಮ ನಡತೆಯನ್ನು ಬದಲಾಯಿಸಿಕೊಂಡು, ಸತ್ಕಾರ್ಯಗಳನ್ನು ಮಾಡಲಾರಂಭಿಸಬೇಕು. ನೀವು ನಿಮ್ಮ ದೇವರಾದ ಯೆಹೋವನ ಆಜ್ಞಾಪಾಲನೆ ಮಾಡಬೇಕು. ಆಗ ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ನಿಮಗೆ ಕೇಡುಮಾಡುವುದಿಲ್ಲ.


ಆದ್ದರಿಂದ ನನ್ನ ಆಜ್ಞೆಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಹೇಳುತ್ತೇನೆ. ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಿರಿ. ಆಗ ನೀವು ನನಗೆ ವಿಶೇಷವಾದ ಜನರಾಗುವಿರಿ. ಈ ಲೋಕವೆಲ್ಲಾ ನನ್ನದೇ. ಆದರೆ ನಾನು ನಿಮ್ಮನ್ನು ನನ್ನ ಸ್ವಂತ ಜನಾಂಗವನ್ನಾಗಿ ಆರಿಸಿಕೊಳ್ಳುತ್ತಿದ್ದೇನೆ.


ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನ್ನೆಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟೆ. ನನ್ನ ಆಜ್ಞಾಪಾಲನೆ ಮಾಡಬೇಕೆಂದು ಅವರಿಗೆ ಹೇಳಿದೆ.


ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.


ಹೇಬೆಲನು ತನ್ನ ಕುರಿಮಂದೆಯಿಂದ ಒಳ್ಳೆಯ ಚೊಚ್ಚಲ ಕುರಿಗಳನ್ನು ಮತ್ತು ಅವುಗಳ ಒಳ್ಳೆಯ ಕೊಬ್ಬಿದ ಭಾಗಗಳನ್ನು ತಂದನು. ಯೆಹೋವನು ಹೇಬೆಲನ ಕಾಣಿಕೆಯನ್ನು ಸ್ವೀಕರಿಸಿದನು;


ಸಮುವೇಲನು, “ನೀನು ಬುದ್ಧಿಹೀನಕೃತ್ಯವನ್ನು ಮಾಡಿದೆ. ನಿನ್ನ ದೇವರಾದ ಯೆಹೋವನ ಆಜ್ಞೆಗೆ ನೀನು ವಿಧೇಯನಾಗಲಿಲ್ಲ. ನೀನು ಯೆಹೋವನ ಆಜ್ಞೆಗೆ ವಿಧೇಯನಾಗಿದ್ದರೆ, ನಿನ್ನ ಕುಟುಂಬವು ಇಸ್ರೇಲನ್ನು ಶಾಶ್ವತವಾಗಿ ಆಳುವಂತೆ ಯೆಹೋವನು ಮಾಡುತ್ತಿದ್ದನು.


ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಇಲ್ಲಿಗೆ ಬಂದು ಗಿಲ್ಗಾಲಿನಲ್ಲಿ ನನ್ನ ಮೇಲೆ ಆಕ್ರಮಣ ಮಾಡುತ್ತಾರೆ. ನಮಗೆ ಸಹಾಯ ಮಾಡುವಂತೆ ನಾನು ದೇವರಲ್ಲಿ ಇನ್ನೂ ಪ್ರಾರ್ಥಿಸಿಲ್ಲ. ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ಸರ್ವಾಂಗಹೋಮವನ್ನು ಅರ್ಪಿಸಿದೆನು’” ಎಂದನು.


ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ. ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು