Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:24 - ಪರಿಶುದ್ದ ಬೈಬಲ್‌

24 ಆಗ ಸೌಲನು ಸಮುವೇಲನಿಗೆ, “ನಾನು ಪಾಪ ಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಸೌಲನು ಸಮುವೇಲನಿಗೆ - ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:24
21 ತಿಳಿವುಗಳ ಹೋಲಿಕೆ  

ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದೆನು” ಎಂದನು. ನಾತಾನನು ದಾವೀದನಿಗೆ, “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ. ನೀನು ಸಾಯುವುದಿಲ್ಲ.


ಮನುಷ್ಯರ ಭಯ ಉರುಲಾಗಬಹುದು. ಆದರೆ ಯೆಹೋವನ ಮೇಲಿರುವ ಭರವಸೆ ಕ್ಷೇಮವಾಗಿಡುವುದು.


ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.


“ನಾನು ಪಾಪ ಮಾಡಿದೆ, ನಿರಪರಾಧಿಯನ್ನು ಕೊಲ್ಲಲು ನಿಮಗೆ ಒಪ್ಪಿಸಿಬಿಟ್ಟೆ” ಎಂದು ಹೇಳಿದನು. ಯೆಹೂದ್ಯ ನಾಯಕರು, “ಅದಕ್ಕೆ ನಾವೇನು ಮಾಡೋಣ! ಅದು ನಿನ್ನ ಸಮಸ್ಯೆ, ನಮ್ಮದಲ್ಲ!” ಎಂದು ಉತ್ತರಕೊಟ್ಟರು.


“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.


ಆಗ ರಾಜನಾದ ಚಿದ್ಕೀಯನು, “ಯೆರೆಮೀಯನು ನಿಮ್ಮ ಅಧಿನದಲ್ಲಿದ್ದಾನೆ. ನೀವು ಏನು ಬೇಕಾದರೂ ಮಾಡಿ” ಎಂದು ಆ ಅಧಿಕಾರಿಗಳಿಗೆ ಹೇಳಿದನು.


ಜನರ ಮಾತಿಗೆ ನಾನೆಂದೂ ಭಯಗೊಂಡಿರಲಿಲ್ಲ; ಯಾವ ಕುಟುಂಬದ ಅಸಮ್ಮತಿಗೂ ನಾನೆಂದೂ ಹೆದರಿಕೊಂಡಿರಲಿಲ್ಲ; ಅಂಥ ಯಾವ ಭಯವೂ ನನ್ನನ್ನು ಮೌನಗೊಳಿಸಿ ಮನೆಯೊಳಗಿರಿಸಲಿಲ್ಲ. ಯಾಕೆಂದರೆ ನನ್ನ ಮೇಲೆ ಜನರಿಗಿರುವ ದ್ವೇಷಕ್ಕೆ ನಾನು ಹೆದರಿಕೊಂಡಿರಲಿಲ್ಲ.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು.


ಸೌಲನು, “ಸೈನಿಕರು ಅಮಾಲೇಕ್ಯರಿಂದ ವಶಪಡಿಸಿಕೊಂಡ ಪಶುಗಳಲ್ಲಿ ಉತ್ತಮವಾದುದ್ದನ್ನು ನಿನ್ನ ದೇವರಾದ ಯೆಹೋವನಿಗೆ ಅರ್ಪಿಸುವುದಕ್ಕಾಗಿ ತೆಗೆದುಕೊಂಡು ಬಂದಿದ್ದಾರೆ. ಆದರೆ ನಾವು ಉಳಿದೆಲ್ಲವನ್ನು ನಾಶಪಡಿಸಿದೆವು” ಎಂದು ಉತ್ತರಿಸಿದನು.


ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.


ಹೀಗಿರುವಾಗ ಆ ಯಜ್ಞಗಳನ್ನು ಮತ್ತು ಕಾಣಿಕೆಗಳನ್ನು ನೀವು ಗೌರವಿಸದಿರುವುದೇಕೇ? ನಿನ್ನ ಮಕ್ಕಳನ್ನು ನನಗಿಂತ ಹೆಚ್ಚು ಗೌರವಿಸುತ್ತಿರುವೆ. ಇಸ್ರೇಲರು ನನಗಾಗಿ ತರುವ ಯಜ್ಞಮಾಂಸದ ಉತ್ತಮ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಂಡಿರುವಿರಿ.’


ಫರೋಹನು ಕೂಡಲೇ ಮೋಶೆ ಆರೋನರನ್ನು ಕರೆಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ ನಿಮಗೂ ವಿರುದ್ಧವಾಗಿ ಪಾಪ ಮಾಡಿದ್ದೇನೆ.


ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ.


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ಅದಕ್ಕೆ ಪುರುಷನು, “ನೀನು ನನಗಾಗಿ ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ಆದ್ದರಿಂದ ನಾನು ತಿಂದೆ” ಅಂದನು.


ನಂತರ ಸೌಲನು, “ನಾನು ಪಾಪಮಾಡಿದ್ದೇನೆ. ನನ್ನ ಮಗನಾದ ದಾವೀದನೇ, ಹಿಂದಿರುಗಿ ಬಾ. ನನ್ನ ಜೀವವು ನಿನಗೆ ಮುಖ್ಯವೆಂಬುದನ್ನು ನನಗೆ ನೀನು ಈ ದಿನ ತೋರಿಸಿರುವೆ. ಆದ್ದರಿಂದ ನಾನು ನಿನ್ನನ್ನು ಹಿಂಸಿಸಲು ಪ್ರಯತ್ನಿಸುವುದಿಲ್ಲ. ನಾನು ಮೂರ್ಖನಂತೆ ವರ್ತಿಸಿದೆ. ನಾನು ದೊಡ್ಡ ತಪ್ಪನ್ನು ಮಾಡಿದ್ದೇನೆ” ಎಂದನು.


ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು