1 ಸಮುಯೇಲ 15:28 - ಪರಿಶುದ್ದ ಬೈಬಲ್28 ಆಗ ಸಮುವೇಲನು ಸೌಲನಿಗೆ, “ನೀನು ನನ್ನ ಮೇಲಂಗಿಯನ್ನು ಹರಿದುಹಾಕಿದೆ. ಇದೇರೀತಿ ಯೆಹೋವನು ಈ ದಿನ ನಿನ್ನಿಂದ ಇಸ್ರೇಲ್ ರಾಜ್ಯವನ್ನು ಹರಿದುಹಾಕಿದನು. ನಿನ್ನ ಸ್ನೇಹಿತರಲ್ಲಿ ಒಬ್ಬನಿಗೆ ಯೆಹೋವನು ರಾಜ್ಯಾಧಿಕಾರವನ್ನು ಕೊಟ್ಟಿದ್ದಾನೆ. ಅವನು ನಿನಗಿಂತ ಉತ್ತಮ ವ್ಯಕ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಸಮುವೇಲನು ಅವನಿಗೆ, “ಯೆಹೋವನು ಈ ಹೊತ್ತು ಇಸ್ರಾಯೇಲಿನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |
ಜನರನ್ನು ಬಿಟ್ಟುಹೋಗುವಂತೆ ನಿನ್ನನ್ನು ಒತ್ತಾಯಿಸಲಾಗುವುದು. ನೀನು ಕಾಡುಪ್ರಾಣಿಗಳೊಂದಿಗೆ ವಾಸಿಸುವೆ. ಹಸುಗಳಂತೆ ಹುಲ್ಲು ತಿನ್ನುವೆ; ನೀನು ಪಾಠ ಕಲಿಯುವದಕ್ಕೆ ಏಳು ವರ್ಷ ಬೇಕಾಗುವುದು. ಆಗ ಮಹೋನ್ನತನಾದ ದೇವರು ಮಾನವನ ಸಾಮ್ರಾಜ್ಯಗಳ ಮೇಲೆ ಆಳ್ವಿಕೆ ಮಾಡುತ್ತಾನೆ ಮತ್ತು ತನಗೆ ಬೇಕಾದವರಿಗೆ ಸಾಮ್ರಾಜ್ಯವನ್ನು ಕೊಡುತ್ತಾನೆ ಎಂಬ ಸತ್ಯವನ್ನು ನೀನು ತಿಳಿದುಕೊಳ್ಳುವೆ” ಎಂದು ನುಡಿಯಿತು.
ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.