Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:3 - ಪರಿಶುದ್ದ ಬೈಬಲ್‌

3 ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಶಿಶುಗಳನ್ನೂ, ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:3
20 ತಿಳಿವುಗಳ ಹೋಲಿಕೆ  

“ತರುವಾಯ ಬಿಳಾಮನು ಅಮಾಲೇಕ್ಯರನ್ನು ನೋಡಿ ಹೀಗೆಂದನು: “ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಬಲಿಷ್ಠರು; ಅಮಾಲೇಕ್ಯರು ಎಲ್ಲಾ ಜನಾಂಗಗಳಲ್ಲಿ ಮೊದಲನೆಯವರು; ಆದರೆ ಕೊನೆಯಲ್ಲಿ ಅವರು ನಾಶವಾಗುವರು.”


ನೋಬ್ ಪಟ್ಟಣವು ಯಾಜಕರ ನಗರವಾಗಿತ್ತು. ದೋಯೇಗನು ನೋಬ್ ಪಟ್ಟಣದ ಎಲ್ಲ ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಹಸುಗೂಸುಗಳನ್ನೂ ತನ್ನ ಖಡ್ಗದಿಂದ ಕೊಂದುಹಾಕಿದನು. ದೋಯೇಗನು ಅವರ ಹಸುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕೊಂದುಬಿಟ್ಟನು.


ಆದ್ದರಿಂದ ಈ ಗುಂಪಿನಲ್ಲಿರುವ ಎಲ್ಲಾ ಗಂಡುಮಕ್ಕಳನ್ನೂ ಪುರುಷಸಂಗಮ ಮಾಡಿದ ಎಲ್ಲಾ ಮಿದ್ಯಾನ್ ಹೆಂಗಸರನ್ನೂ ಕೊಲ್ಲಬೇಕು.


ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.


ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.


ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.


ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳೆಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು.


ಹೀಗೆ ಸೌಲನು ಮತ್ತು ಇಸ್ರೇಲ್ ಸೈನಿಕರು ಅಗಾಗನಿಗೆ ಜೀವದಾನ ಮಾಡಿದರು. ಅವರು ಉತ್ತಮ ಕುರಿಗಳನ್ನೂ ದನಗಳನ್ನೂ ಆಡಿನ ಮರಿಗಳನ್ನೂ ಉಳಿಸಿದರು. ಅವರು ಉಪಯುಕ್ತವಾದುದನ್ನು ಉಳಿಸಿ, ಅನುಪಯುಕ್ತವಾದುದನ್ನು ನಾಶಗೊಳಿಸಿದರು.


ಆತನು ನಿನಗೆ, ‘ಹೋಗು ದುಷ್ಟರಾದ ಅಮಾಲೇಕ್ಯರ ಮೇಲೆ ಯುದ್ಧ ಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಗೊಳಿಸು’ ಎಂದು ಆಜ್ಞಾಪಿಸಿದರು.


ದಾವೀದನು ಆ ಪ್ರದೇಶದ ಜನರೊಂದಿಗೆ ಯುದ್ಧಮಾಡಿ ಯಾರನ್ನೂ ಜೀವಸಹಿತ ಬಿಡಲಿಲ್ಲ. ಅವರಿಗೆ ಸೇರಿದ ಕುರಿಗಳನ್ನು ದನಗಳನ್ನು, ಹೇಸರಕತ್ತೆಗಳನ್ನು, ಒಂಟೆಗಳನ್ನು ಮತ್ತು ಬಟ್ಟೆಗಳನ್ನು ದಾವೀದನು ವಶಪಡಿಸಿಕೊಂಡನು. ನಂತರ ಅವುಗಳನ್ನು ಆಕೀಷನ ಬಳಿಗೆ ತಂದನು.


ದಾವೀದನು ಅವರನ್ನು ಸೋಲಿಸಿ ಅವರನ್ನು ಕೊಂದನು. ಅವರು ಹೊತ್ತಾರೆಯಿಂದ ಮಾರನೆಯ ದಿನದ ಸಂಜೆಯವರೆಗೆ ಹೋರಾಡಿದರು. ನಾನೂರು ಮಂದಿ ಯುವಕರು ತಮ್ಮ ಒಂಟೆಗಳ ಮೇಲೇರಿ ಓಡಿಹೋದದ್ದನ್ನು ಬಿಟ್ಟರೆ, ಉಳಿದ ಅಮಾಲೇಕ್ಯರಲ್ಲಿ ಯಾರೂ ತಪ್ಪಿಸಿಕೊಳ್ಳಲಾಗಲಿಲ್ಲ.


ನಂತರ ಸೌಲನು, ‘ನೀನು ಯಾರು?’ ಎಂದು ಕೇಳಿದನು. ‘ನಾನೊಬ್ಬ ಅಮಾಲೇಕ್ಯನು’ ಎಂದು ನಾನು ಹೇಳಿದೆನು.


ಅವರು ಆ ಪಟ್ಟಣವನ್ನೂ ಅದರ ಅರಸನನ್ನೂ ದೆಬೀರಿನ ಸಮೀಪದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಅವರು ಆ ಪಟ್ಟಣದಲ್ಲಿದ್ದ ಎಲ್ಲರನ್ನು ಕೊಂದರು. ಅಲ್ಲಿ ಯಾರೊಬ್ಬರೂ ಸಜೀವವಾಗಿ ಉಳಿಯಲಿಲ್ಲ. ಇಸ್ರೇಲರು ಹೆಬ್ರೋನ್ ಮತ್ತು ಅದರ ಅರಸನಿಗೆ ಮಾಡಿದಂತೆಯೇ ದೆಬೀರ್ ಮತ್ತು ಅದರ ಅರಸನಿಗೆ ಮಾಡಿದರು. ಲಿಬ್ನ ಮತ್ತು ಅದರ ಅರಸನಿಗೂ ಹೀಗೆಯೇ ಮಾಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು