1 ಸಮುಯೇಲ 15:30 - ಪರಿಶುದ್ದ ಬೈಬಲ್30 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆಂಬುದು ಸರಿ. ಆದರೆ ದಯವಿಟ್ಟು ನನ್ನ ಜೊತೆಯಲ್ಲಿ ಹಿಂದಿರುಗಿ ಬಾ. ಇಸ್ರೇಲಿನ ಜನರೆದುರು ಮತ್ತು ನಾಯಕರೆದುರು ಸ್ವಲ್ಪ ಗೌರವವನ್ನು ತೋರಿಸು. ನನ್ನ ಜೊತೆಯಲ್ಲಿ ನೀನು ಹಿಂದಿರುಗಿ ಬಂದರೆ, ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸಬಹುದು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಅದಕ್ಕೆ ಸೌಲನು - ನಾನು ಪಾಪ ಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲ್ಯರ ಮುಂದೆಯೂ ಜನರ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು; ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವದಕ್ಕಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಬೇಡಿಕೊಳ್ಳಲು ಅವನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು. ಅಧ್ಯಾಯವನ್ನು ನೋಡಿ |