33 ಆದರೆ ಸಮುವೇಲನು ಅಗಾಗನಿಗೆ, “ನಿನ್ನ ಕತ್ತಿಯು ಅನೇಕ ತಾಯಂದಿರಿಗೆ ಮಕ್ಕಳಿಲ್ಲದಂತೆ ಮಾಡಿದೆ. ಆದ್ದರಿಂದ ಈಗ ನಿನ್ನ ತಾಯಿಗೆ ಮಕ್ಕಳಿಲ್ಲದಂತಾಯಿತು” ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.
33 ಆದರೆ ಸಮುವೇಲನು ಅವನಿಗೆ, “ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರಶೋಕವನ್ನುಂಟುಮಾಡಿದೆ; ಅದರಂತೆ ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ” ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದುಹಾಕಿದನು.
33 ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.
33 ಆದರೆ ಸಮುವೇಲನು ಅವನಿಗೆ - ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರ ಶೋಕವನ್ನುಂಟುಮಾಡಿತು; ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದು ಹಾಕಿದನು.
33 ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.
ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ. ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ. ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿಕೊಡಿರಿ.
ಆಗ ಎಲೀಯನು, “ಬಾಳನ ಪ್ರವಾದಿಗಳನ್ನು ಹಿಡಿದು ತನ್ನಿ! ಅವರಲ್ಲಿ ಒಬ್ಬರಾದರೂ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಿ!” ಎಂದು ಹೇಳಿದನು. ಪ್ರವಾದಿಗಳನ್ನೆಲ್ಲ ಜನರು ಹಿಡಿದುಕೊಂಡರು. ಎಲೀಯನು ಅವರನ್ನೆಲ್ಲಾ ಕೀಷೋನ್ ಬುಗ್ಗೆಗೆ ಎಳೆದುಕೊಂಡು ಹೋಗಿ ಕೊಂದು ಹಾಕಿದನು.
ಸಮುವೇಲನು, “ಅಮಾಲೇಕ್ಯರ ರಾಜನಾದ ಅಗಾಗನನ್ನು ನನ್ನ ಬಳಿಗೆ ಕರೆದುಕೊಂಡು ಬಾ” ಎಂದು ಹೇಳಿದನು. ಅಗಾಗನು ಸಮುವೇಲನ ಹತ್ತಿರಕ್ಕೆ ಬಂದನು. ಅಗಾಗನನ್ನು ಸರಪಣಿಗಳಿಂದ ಬಂಧಿಸಲಾಗಿತ್ತು. ಅಗಾಗನು, “ಅವನು ನನ್ನನ್ನು ನಿಜವಾಗಿಯೂ ಕೊಲ್ಲುವುದಿಲ್ಲ” ಎಂದು ಆಲೋಚಿಸಿದನು.
ಆದ್ದರಿಂದ ಈಗ ಅವರ ಮಕ್ಕಳು ಕ್ಷಾಮಪೀಡಿತರಾಗಿ ಉಪವಾಸಬೀಳುವಂತೆ ಮಾಡು. ಅವರ ಶತ್ರುಗಳು ಅವರನ್ನು ಖಡ್ಗದಿಂದ ಸೋಲಿಸುವಂತೆ ಮಾಡು. ಅವರ ಹೆಂಡತಿಯರು ಮಕ್ಕಳನ್ನು ಕಳೆದುಕೊಳ್ಳಲಿ ಮತ್ತು ವಿಧವೆಯರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗದಿಂದ ಹತರಾಗಲಿ.
“ನನಗಿಂತ ಮೊದಲು ನೀನು ಗಿಲ್ಗಾಲಿಗೆ ಹೋಗು. ನಾನು ನಿನ್ನನ್ನು ಅಲ್ಲಿ ಭೇಟಿಯಾಗುತ್ತೇನೆ. ನಾನು ಅಲ್ಲಿ ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಅರ್ಪಿಸುತ್ತೇನೆ. ಆದರೆ ನೀನು ಏಳು ದಿನಗಳವರೆಗೆ ಕಾಯಲೇಬೇಕು. ಅನಂತರ ನಾನು ನಿನ್ನ ಬಳಿಗೆ ಬಂದು ನೀನು ಮಾಡಬೇಕಾದದ್ದನ್ನು ತಿಳಿಸುತ್ತೇನೆ” ಎಂದು ಹೇಳಿದನು.