Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:35 - ಪರಿಶುದ್ದ ಬೈಬಲ್‌

35 ಅನಂತರ ಸಮುವೇಲನು ತನ್ನ ಜೀವಿತದ ಅವಧಿಯಲ್ಲಿ ಸೌಲನನ್ನು ನೋಡಲಿಲ್ಲ. ಸಮುವೇಲನು ಸೌಲನಿಗಾಗಿ ಬಹಳ ದುಃಖಪಟ್ಟನು. ಸೌಲನನ್ನು ಇಸ್ರೇಲರ ರಾಜನನ್ನಾಗಿ ಮಾಡಿದ್ದಕ್ಕೆ ಯೆಹೋವನು ಬಹಳ ಸಂತಾಪಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸಮುವೇಲನು ಜೀವದಿಂದ ಇರುವವರೆಗೂ ಸೌಲನನ್ನು ನೋಡಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ವಿಷಾದಪಟ್ಟನು. ಸಮುವೇಲನು ಅವನ ಕುರಿತು ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡುವದಕ್ಕೆ ಹೋಗಲಿಲ್ಲ; ಆದರೆ ಯೆಹೋವನು ಸೌಲನನ್ನು ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪಪಟ್ಟದರಿಂದ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಸಮುಯೇಲನು ತಾನು ಸಾಯುವ ದಿವಸದವರೆಗೂ ಸೌಲನನ್ನು ತಿರುಗಿ ಕಾಣಲು ಬರಲಿಲ್ಲ. ಸಮುಯೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಮಾಡಿದ್ದಕ್ಕೋಸ್ಕರ ಯೆಹೋವ ದೇವರು ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:35
10 ತಿಳಿವುಗಳ ಹೋಲಿಕೆ  

ನಂತರ ಸೌಲನು ತಾನು ಧರಿಸಿದ್ದ ಬಟ್ಟೆಗಳನ್ನು ತೆಗೆದುಹಾಕಿದನು. ಸಮುವೇಲನ ಎದುರಿನಲ್ಲಿ ಸೌಲನೂ ಸಹ ಪ್ರವಾದಿಸುತ್ತಿದ್ದನು. ಅಂದು ಹಗಲು ರಾತ್ರಿಯೆಲ್ಲ ಸೌಲನು ಬೆತ್ತಲೆಯಾಗಿ ಅಲ್ಲಿಯೇ ಮಲಗಿದ್ದನು. ಆದ್ದರಿಂದಲೇ ಜನರು, “ಸೌಲನೂ ಪ್ರವಾದಿಗಳಲ್ಲಿ ಒಬ್ಬನೇ?” ಎಂದು ಹೇಳುತ್ತಾರೆ.


ಯೆಹೋವನು ಸಮುವೇಲನಿಗೆ, “ಸೌಲನು ನನ್ನ ಮಾರ್ಗವನ್ನು ತ್ಯಜಿಸಿದನು. ನಾನು ಸೌಲನನ್ನು ರಾಜನನ್ನಾಗಿ ಮಾಡಿದ್ದಕ್ಕಾಗಿ ಪಶ್ಚಾತ್ತಾಪಪಡುತ್ತೇನೆ. ನಾನು ಆಜ್ಞಾಪಿಸಿದ ಕಾರ್ಯಗಳನ್ನು ಅವನು ಮಾಡುತ್ತಿಲ್ಲ” ಎಂದು ಹೇಳಿದನು. ಸಮುವೇಲನು ತಳಮಳಗೊಂಡನು. ಅವನು ರಾತ್ರಿಯೆಲ್ಲ ಅಳುತ್ತಾ ಯೆಹೋವನಲ್ಲಿ ಮೊರೆಯಿಟ್ಟನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.


ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ನಿನ್ನ ವಾಕ್ಯಕ್ಕೆ ವಿಧೇಯರಾಗದ ಆ ದ್ರೋಹಿಗಳನ್ನು ನೋಡಿದರೆ ನನಗೆ ಅಸಹ್ಯವಾಗುತ್ತದೆ.


ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.


ಸೌಲನ ಮಗಳಾದ ಮೀಕಲಳು ಬಂಜೆಯಾಗಿ ಉಳಿದಳು. ಅವಳು ಮಕ್ಕಳೇ ಇಲ್ಲದೆ ಸತ್ತುಹೋದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು