Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:7 - ಪರಿಶುದ್ದ ಬೈಬಲ್‌

7 ಸೌಲನು ಅಮಾಲೇಕ್ಯರನ್ನು ಸೋಲಿಸಿದನು. ಅವನು ಹವೀಲಾದಿಂದ ಈಜಿಪ್ಟಿನ ಗಡಿಯಲ್ಲಿರುವ ಶೂರಿನವರೆಗೂ ಅವರೊಡನೆ ಹೋರಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೆ ಅವರನ್ನು ಸಂಹರಿಸುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಹೊಡೆಯುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ಹವೀಲದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿಗೆ ಹೋಗುವ ಮೇರೆಯವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:7
11 ತಿಳಿವುಗಳ ಹೋಲಿಕೆ  

ಸೌಲನು ಬಹಳ ಧೈರ್ಯಶಾಲಿ. ಅವನು ಅಮಾಲೇಕ್ಯರನ್ನೂ ಸೋಲಿಸಿದನು. ಇಸ್ರೇಲರನ್ನು ಕೊಳ್ಳೆಹೊಡೆಯಬೇಕೆಂದಿದ್ದ ಶತ್ರುಗಳಿಂದ ಸೌಲನು ಇಸ್ರೇಲರನ್ನು ರಕ್ಷಿಸಿದನು.


ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು.


ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಆ ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು.


ದಾವೀದನು ಮತ್ತು ಅವನ ಜನರು ಅಮಾಲೇಕ್ಯರ ಮೇಲೆಯೂ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಯುದ್ಧಮಾಡಲು ಹೋದರು. ದಾವೀದನ ಜನರು ಅವರನ್ನು ಸೋಲಿಸಿ ಅವರ ಸಂಪತ್ತನ್ನು ವಶಪಡಿಸಿಕೊಂಡರು. ಈಜಿಪ್ಟಿನವರೆಗೆ ವಿಸ್ತರಿಸಿರುವ ಶೂರಿನ ಸಮೀಪದ ತೇಲಾಮಿನವರೆಗೂ ಆ ಜನರು ವಾಸಿಸುತ್ತಿದ್ದರು.


ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.


ಮೊದಲನೆ ನದಿಯ ಹೆಸರು ಪೀಶೋನ್. ಹವೀಲ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ.


ದುಷ್ಟರಿಗೆ ದೇವರಲ್ಲಿ ಭಯಭಕ್ತಿಯಿಲ್ಲದಿರುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ; ಅವರ ಜೀವಿತವು ಸಾಯಂಕಾಲದ ನೆರಳಿನಂತೆ ಇಲ್ಲವಾಗುವುದು.


ಅಪಾಯ ಬಂದಾಗ ದುಷ್ಟನು ಪಾರಾಗುವನು; ದೇವರ ಕೋಪವು ತೋರಿಬರುವ ದಿನದಲ್ಲಿ ಅವನು ತಪ್ಪಿಸಿಕೊಳ್ಳುವನು.


ಮೂರನೆಯ ದಿನ ದಾವೀದನು ಮತ್ತು ಅವನ ಜನರು ಚಿಕ್ಲಗ್ ಊರಿಗೆ ಬಂದರು. ಅಮಾಲೇಕ್ಯರು ಚಿಕ್ಲಗನ್ನು ಆಕ್ರಮಣ ಮಾಡಿರುವುದನ್ನು ಅವರು ನೋಡಿದರು. ಅಮಾಲೇಕ್ಯರು ನೆಗೆವ್ ಪ್ರದೇಶದ ಮೇಲೆ ದಾಳಿ ಮಾಡಿದರು. ಅವರು ಚಿಕ್ಲಗನ್ನು ಆಕ್ರಮಿಸಿದ್ದರು ಮತ್ತು ಆ ನಗರವನ್ನು ಸುಟ್ಟುಹಾಕಿದ್ದರು.


ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು