1 ಸಮುಯೇಲ 15:8 - ಪರಿಶುದ್ದ ಬೈಬಲ್8 ಸೌಲನು ಅಮಾಲೇಕ್ಯರ ರಾಜನಾದ ಅಗಾಗನನ್ನು ಜೀವಸಹಿತ ಉಳಿಸಿದನು. ಆದರೆ ಉಳಿದ ಅಮಾಲೇಕ್ಯರನ್ನೆಲ್ಲ ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು, ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರ ಅರಸನಾದ ಅಗಾಗನನ್ನು ಸಜೀವಿಯಾಗಿ ಹಿಡಿದು ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು, ಆದರೆ ಸಮಸ್ತ ಜನರನ್ನು ಖಡ್ಗದಿಂದ ಸಂಪೂರ್ಣ ನಾಶಮಾಡಿದನು. ಅಧ್ಯಾಯವನ್ನು ನೋಡಿ |
ಈಗ, ನೀನು ಹೋಗಿ ಅಮಾಲೇಕ್ಯರ ವಿರುದ್ಧ ಹೋರಾಡು. ನೀನು ಅಮಾಲೇಕ್ಯರನ್ನೂ ಮತ್ತು ಅವರಿಗೆ ಸೇರಿದ ಎಲ್ಲವನ್ನೂ ನಾಶಗೊಳಿಸಬೇಕು. ಯಾರನ್ನೂ ಜೀವದಿಂದ ಉಳಿಸಬೇಡ, ನೀನು ಎಲ್ಲ ಗಂಡಸರನ್ನು ಮತ್ತು ಹೆಂಗಸರನ್ನು ಕೊಲ್ಲಬೇಕು. ನೀನು ಎಲ್ಲ ಮಕ್ಕಳನ್ನೂ ಎಳೆಕೂಸುಗಳನ್ನೂ ಕೊಲ್ಲಬೇಕು. ನೀನು ಅವರಿಗೆ ಸೇರಿದ ಎಲ್ಲ ಹಸುಗಳನ್ನೂ ಕುರಿಗಳನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಂದುಹಾಕಬೇಕು’” ಎಂದು ಹೇಳಿದನು.