1 ಸಮುಯೇಲ 16:1 - ಪರಿಶುದ್ದ ಬೈಬಲ್1 ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು. ಅಧ್ಯಾಯವನ್ನು ನೋಡಿ |
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
‘ನಾನು ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದೆನು. ಆದರೆ ನನ್ನನ್ನು ಘನಪಡಿಸಿಕೊಳ್ಳುವುದಕ್ಕಾಗಿ ಆಲಯವೊಂದನ್ನು ಕಟ್ಟಲು ಇಸ್ರೇಲಿನ ಕುಲಗಳಿಂದ ನಾನಿನ್ನೂ ಯಾವ ನಗರವನ್ನು ಆರಿಸಿಕೊಂಡಿರಲಿಲ್ಲ. ಇಸ್ರೇಲಿನ ಜನರನ್ನಾಳುವ ನಾಯಕನನ್ನು ನಾನಿನ್ನೂ ಆರಿಸಿಕೊಂಡಿರಲಿಲ್ಲ, ಆದರೆ ನಾನೀಗ ಜೆರುಸಲೇಮನ್ನು ನನಗೆ ಸನ್ಮಾನವನ್ನು ತರುವಂಥ ಸ್ಥಳವನ್ನಾಗಿ ಆರಿಸಿಕೊಂಡಿರುವೆ. ಇಸ್ರೇಲಿನ ನನ್ನ ಜನರನ್ನು ಆಳಲು ದಾವೀದನನ್ನು ನಾನು ಆರಿಸಿಕೊಂಡಿರುವೆ’ ಎಂದು ಹೇಳಿದ್ದನು.