1 ಸಮುಯೇಲ 16:11 - ಪರಿಶುದ್ದ ಬೈಬಲ್11 ನಂತರ ಸಮುವೇಲನು ಇಷಯನನ್ನು, “ನಿನಗೆ ಇರುವ ಮಕ್ಕಳು ಇಷ್ಟೆಯೋ?” ಎಂದು ಕೇಳಿದನು. ಇಷಯನು, “ಇಲ್ಲ, ನನಗೆ ಇನ್ನೊಬ್ಬ ಕಿರಿಯ ಮಗನಿದ್ದಾನೆ. ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆಕಳುಹಿಸು. ಅವನನ್ನು ಇಲ್ಲಿಗೆ ಬರಹೇಳು. ಅವನು ಬರುವತನಕ ನಾವು ಊಟಕ್ಕೆ ಕುಳಿತುಕೊಳ್ಳುವುದು ಬೇಡ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅನಂತರ ಸಮುವೇಲನು ಇಷಯನನ್ನು - ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ ಎಂದು ಕೇಳಲು ಅವನು - ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ ಎಂದು ಉತ್ತರಕೊಟ್ಟನು. ಆಗ ಸಮುವೇಲನು - ಅವನನ್ನು ಕರೇಕಳುಹಿಸು; ಅವನು ಬರುವವರೆಗೂ ನಾವು ಊಟಕ್ಕೆ ಕೂತುಕೊಳ್ಳಬಾರದು ಎಂದು ಹೇಳಲು ಇಷಯನು ಅವನನ್ನು ಕರತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸಮುಯೇಲನು, “ನಿನಗಿರುವ ಮಕ್ಕಳು ಇಷ್ಟೇನೋ?” ಎಂದು ಇಷಯನನ್ನು ಕೇಳಿದನು. ಅದಕ್ಕವನು, “ಇವರೆಲ್ಲರಿಗಿಂತಲೂ ಚಿಕ್ಕವನೊಬ್ಬನು ಉಳಿದಿದ್ದಾನೆ. ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ,” ಎಂದನು. ಆಗ ಸಮುಯೇಲನು ಇಷಯನಿಗೆ, “ಅವನನ್ನು ಕರೆಕಳುಹಿಸು. ಏಕೆಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕುಳಿತುಕೊಳ್ಳಬಾರದು,” ಎಂದನು. ಅಧ್ಯಾಯವನ್ನು ನೋಡಿ |
ದಾವೀದನು ಸೈನಿಕರೊಡನೆ ಮಾತಾಡುತ್ತಿರುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿಸಿಕೊಂಡನು. ಎಲೀಯಾಬನು ದಾವೀದನ ಮೇಲೆ ಕೋಪಗೊಂಡು ಅವನಿಗೆ, “ನೀನು ಇಲ್ಲಿಗೆ ಬಂದದ್ದೇಕೆ? ಅಲ್ಲಿದ್ದ ಕೆಲವು ಕುರಿಗಳನ್ನು ಯಾರ ಬಳಿ ಬಿಟ್ಟಿರುವೆ? ನೀನು ಇಲ್ಲಿಗೆ ಏಕೆ ಬಂದಿರುವೆಯೆಂಬುದು ನನಗೆ ಗೊತ್ತು. ನಿನಗೆ ಹೇಳಿದ್ದನ್ನು ನೀನು ಮಾಡುವುದಿಲ್ಲ. ನೀನು ಕೇವಲ ಯುದ್ಧವನ್ನು ನೋಡುವುದಕ್ಕಾಗಿಯೇ ಇಲ್ಲಿಗೆ ಬಂದಿರುವೆ” ಎಂದು ಗದರಿಸಿದನು.