Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:12 - ಪರಿಶುದ್ದ ಬೈಬಲ್‌

12 ಇಷಯನು ಕಿರಿಯ ಮಗನನ್ನು ಕರೆತರಲು ಒಬ್ಬನನ್ನು ಕಳುಹಿಸಿದನು. ಇವನಾದರೋ ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಮೇಲೆದ್ದು ನಿಲ್ಲು, ಅವನನ್ನು ಅಭಿಷೇಕಿಸು. ಇವನನ್ನೇ ನಾನು ಆರಿಸಿದ್ದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಕೆಂಬಣ್ಣದವನೂ ಸುಂದರನೇತ್ರನೂ ನೋಟಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ - ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ ಎಂದು ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಇಷಯನು ಅವನನ್ನು ಕರೆಯಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ, ಸುಂದರ ಮುಖವುಳ್ಳವನಾಗಿಯೂ, ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಯೆಹೋವ ದೇವರು ಸಮುಯೇಲನಿಗೆ, “ನೀನೆದ್ದು ಇವನನ್ನು ಅಭಿಷೇಕಿಸು. ಇವನು ಅವನೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:12
19 ತಿಳಿವುಗಳ ಹೋಲಿಕೆ  

ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.


ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.


“ಮೋಶೆಯು ಜನಿಸಿದ್ದು ಈ ಕಾಲದಲ್ಲೇ. ಅವನು ಬಹು ಸುಂದರನಾಗಿದ್ದನು. ಮೋಶೆಯನ್ನು ಅವನ ತಂದೆಯ ಮನೆಯಲ್ಲಿ ಮೂರು ತಿಂಗಳವರೆಗೆ ನೋಡಿಕೊಳ್ಳಲಾಯಿತು.


ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.


ಗೊಲ್ಯಾತನು ದಾವೀದನನ್ನು ನೋಡಿ ನಕ್ಕನು. ದಾವೀದನು ಸೈನಿಕನಲ್ಲವೆಂಬುದು ಗೊಲ್ಯಾತನಿಗೆ ಗೊತ್ತಾಯಿತು. ದಾವೀದನು ಕೆಂಬಣ್ಣದ ಸುಂದರ ಯುವಕನಾಗಿದ್ದನು.


ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ನಿನಗೆ ಹೇಳಿದ ಮನುಷ್ಯ ಇವನೇ. ಇವನು ನನ್ನ ಜನರನ್ನು ಆಳುತ್ತಾನೆ” ಎಂದು ಹೇಳಿದನು.


ಆದ್ದರಿಂದ ಪೋಟೀಫರನು ತಾನು ಊಟಮಾಡುವ ಆಹಾರವೊಂದನ್ನು ಬಿಟ್ಟು ಉಳಿದೆಲ್ಲದರ ಜವಾಬ್ದಾರಿಯನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಿಂದ ಇದ್ದನು. ಯೋಸೇಫನು ನೋಡಲು ಸುಂದರನಾಗಿಯೂ ರೂಪವಂತನಾಗಿಯೂ ಇದ್ದನು.


ಮೋಶೆಯು ಹುಟ್ಟಿದಾಗ ಅವನ ತಂದೆತಾಯಿಗಳು ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳವರೆಗೆ ಅಡಗಿಸಿಟ್ಟರು. ಮಗುವಾಗಿದ್ದ ಮೋಶೆಯ ಸೌಂದರ್ಯವನ್ನು ಅವರು ಕಂಡದ್ದರಿಂದ ರಾಜನಾದ ಫರೋಹನ ಆಜ್ಞೆಗೂ ಅವಿಧೇಯರಾಗಲು ಹಿಂಜರಿಯಲಿಲ್ಲ.


ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.


ಆ ಸ್ತ್ರೀಯು ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮವಿತ್ತಳು. ಮಗುವು ಸುಂದರವಾಗಿತ್ತು. ಆಕೆ ಮೂರು ತಿಂಗಳವರೆಗೆ ಆ ಮಗುವನ್ನು ಬಚ್ಚಿಟ್ಟಳು.


ದಾವೀದನು ಗೊಲ್ಯಾತನೊಂದಿಗೆ ಯುದ್ಧಕ್ಕೆ ಹೊರಟಿದ್ದನ್ನು ಸೌಲನು ಗಮನಿಸುತ್ತಿದ್ದನು. ಸೌಲನು ತನ್ನ ಸೇನಾಧಿಪತಿಯಾದ ಅಬ್ನೇರನನ್ನು, “ಆ ಯುವಕನ ತಂದೆ ಯಾರು?” ಎಂದು ಪ್ರಶ್ನಿಸಿದನು. ಅಬ್ನೇರನು, “ಅರಸನೇ, ನಿನ್ನ ಜೀವದಾಣೆ, ಅವನು ಯಾರೋ ನನಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟನು.


“ನೀನು ಇದನ್ನು ನನ್ನ ಸೇವಕನಾದ ದಾವೀದನಿಗೆ ಹೇಳಲೇಬೇಕು: ‘ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ಹುಲ್ಲುಗಾವಲಿನಲ್ಲಿ ಕುರಿಕಾಯುತ್ತಿದ್ದ ನಿನ್ನನ್ನು ನಾನು ನನ್ನ ಜನರಾದ ಇಸ್ರೇಲರಿಗೆ ನಾಯಕನಾಗಿ ಮಾಡಲು ಕರೆತಂದೆನು.


ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: “ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.


ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.


ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು.


ಆಗ ಅವನು, “ಈ ಪ್ರಪಂಚದಲ್ಲಿ ಯೆಹೋವನು ತನ್ನ ಸೇವೆಮಾಡಲು ಆರಿಸಿಕೊಂಡ ಇಬ್ಬರು ಮನುಷ್ಯರನ್ನು ಅವು ಪ್ರತಿನಿಧಿಸುತ್ತವೆ” ಅಂದನು.


ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು