Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:19 - ಪರಿಶುದ್ದ ಬೈಬಲ್‌

19 ಸೌಲನು ಸಂದೇಶಕರ ಮೂಲಕ ಇಷಯನಿಗೆ, “ನಿನಗೆ ದಾವೀದನೆಂಬ ಮಗನಿದ್ದಾನೆ. ಅವನು ನಿನ್ನ ಕುರಿಗಳನ್ನು ಕಾಯುತ್ತಾನೆ. ಅವನನ್ನು ನನ್ನ ಬಳಿಗೆ ಕಳುಹಿಸು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕೂಡಲೆ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿ ಮೇಯಿಸುತ್ತಿರುವ ನಿನ್ನ ಮಗ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ, “ಕುರಿಗಳ ಬಳಿಯಲ್ಲಿ ಇರುವ ನಿನ್ನ ಪುತ್ರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:19
12 ತಿಳಿವುಗಳ ಹೋಲಿಕೆ  

ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು.


ನಂತರ ಸಮುವೇಲನು ಇಷಯನನ್ನು, “ನಿನಗೆ ಇರುವ ಮಕ್ಕಳು ಇಷ್ಟೆಯೋ?” ಎಂದು ಕೇಳಿದನು. ಇಷಯನು, “ಇಲ್ಲ, ನನಗೆ ಇನ್ನೊಬ್ಬ ಕಿರಿಯ ಮಗನಿದ್ದಾನೆ. ಅವನು ಕುರಿಮೇಯಿಸುವದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆಕಳುಹಿಸು. ಅವನನ್ನು ಇಲ್ಲಿಗೆ ಬರಹೇಳು. ಅವನು ಬರುವತನಕ ನಾವು ಊಟಕ್ಕೆ ಕುಳಿತುಕೊಳ್ಳುವುದು ಬೇಡ” ಎಂದು ಹೇಳಿದನು.


ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.


ಆತನು ಅವರನ್ನು ಪ್ರಮುಖರನ್ನಾಗಿಯೂ ನಾಯಕರುಗಳನ್ನಾಗಿಯೂ ಮಾಡುವನು.


ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.


ಅವನ ಸೇವಕರಲ್ಲಿ ಒಬ್ಬನು, “ಇಷಯ ಎಂಬ ಹೆಸರಿನ ಒಬ್ಬ ಮನುಷ್ಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದಾನೆ. ನಾನು ಇಷಯನ ಮಗನನ್ನು ನೋಡಿದ್ದೇನೆ. ಅವನು ಕಿನ್ನರಿ ಬಾರಿಸುತ್ತಾನೆ. ಅವನು ಧೈರ್ಯಶಾಲಿ ಮತ್ತು ಒಳ್ಳೆಯ ಹೋರಾಟಗಾರ; ಅವನು ಬುದ್ಧಿವಂತನೂ ರಣಶೂರನೂ ರೂಪವಂತನೂ ಆಗಿದ್ದಾನೆ. ಅದಲ್ಲದೆ ಯೆಹೋವನು ಅವನೊಂದಿಗಿದ್ದಾನೆ” ಎಂದು ಹೇಳಿದನು.


ಇಷಯನು ಕೆಲವು ರೊಟ್ಟಿಗಳನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕೊಡುಗೆಗಳಾಗಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು