1 ಸಮುಯೇಲ 16:2 - ಪರಿಶುದ್ದ ಬೈಬಲ್2 ಅದಕ್ಕೆ ಸಮುವೇಲನು, “ನಾನು ಹೊರಟರೆ ಸೌಲನಿಗೆ ಈ ಸುದ್ದಿಯು ತಿಳಿಯುತ್ತದೆ. ಆಗ ಅವನು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಾನೆ” ಎಂದನು. ಯೆಹೋವನು, “ಬೆತ್ಲೆಹೇಮಿಗೆ ಹೋಗು. ನಿನ್ನೊಡನೆ ಒಂದು ಎಳೆಕರುವನ್ನು ತೆಗೆದುಕೊಂಡು ಹೋಗು. ‘ನಾನು ಯೆಹೋವನಿಗೆ ಯಜ್ಞವನ್ನರ್ಪಿಸಲು ಬಂದಿದ್ದೇನೆ’ ಎಂದು ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ” ಎಂದನು. ಅದಕ್ಕೆ ಯೆಹೋವನು, “ನೀನು ಒಂದು ಕರುವನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವುದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕಾಗಿ ಕರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದಕ್ಕೆ ಸಮುವೇಲನು - ನಾನು ಹೋಗುವದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ ಅನ್ನಲು ಆತನು - ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕೆ ಕರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ, ಅಧ್ಯಾಯವನ್ನು ನೋಡಿ |