1 ಸಮುಯೇಲ 16:20 - ಪರಿಶುದ್ದ ಬೈಬಲ್20 ಇಷಯನು ಕೆಲವು ರೊಟ್ಟಿಗಳನ್ನೂ ಒಂದು ಸೀಸೆ ದ್ರಾಕ್ಷಾರಸವನ್ನೂ ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕೊಡುಗೆಗಳಾಗಿ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಜೆಸ್ಸೆಯನು ರೊಟ್ಟಿಯನ್ನು, ಒಂದು ಬುದ್ದಲಿ ದ್ರಾಕ್ಷಾರಸವನ್ನು ಹಾಗು ಒಂದು ಹೋತಮರಿಯನ್ನು ಕತ್ತೆಯ ಮೇಲೆ ಹೇರಿಸಿ, ತನ್ನ ಮಗ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಹೋತಮರಿಯನ್ನೂ ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಮೇಕೆಯ ಮರಿಯನ್ನೂ ಕತ್ತೆಯ ಮೇಲೆ ಹೇರಿ, ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿ |
ಆದರೆ ಕೆಲವು ಕಿರುಕುಳಕಾರರು, “ಈ ಮನುಷ್ಯನು ಹೇಗೆ ತಾನೆ ನಮ್ಮನ್ನು ರಕ್ಷಿಸುವನು?” ಎಂದು ಹೇಳಿದರು. ಅವರು ಸೌಲನ ಬಗ್ಗೆ ಕೆಟ್ಟಮಾತುಗಳನ್ನು ಆಡಿದರು; ಅವನನ್ನು ತಿರಸ್ಕರಿಸಿ, ಕಾಣಿಕೆಗಳನ್ನು ತಂದುಕೊಡಲಿಲ್ಲ. ಆದರೆ ಸೌಲನು ಏನೂ ಮಾತನಾಡಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು, ಗಾದ್ ಮತ್ತು ರೂಬೆನ್ ಕುಲದವರಿಗೆ ಕಿರುಕುಳಕೊಡುತ್ತಿದ್ದನು. ನಾಹಾಷನು ಪ್ರತಿ ಮನುಷ್ಯನ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ನಾಹಾಷನು ಅವರಿಗೆ ಸಹಾಯಮಾಡಲು ಯಾರಿಗೂ ಅವಕಾಶಕೊಡುತ್ತಿರಲಿಲ್ಲ. ಅಮ್ಮೋನಿಯರ ರಾಜನಾದ ನಾಹಾಷನು ಜೋರ್ಡನ್ ನದಿಯ ಪೂರ್ವ ಪ್ರದೇಶದಲ್ಲಿ ವಾಸವಾಗಿದ್ದ ಎಲ್ಲ ಇಸ್ರೇಲರ ಬಲಗಣ್ಣನ್ನು ಕಿತ್ತುಹಾಕುತ್ತಿದ್ದನು. ಆದ್ದರಿಂದ ಅಮ್ಮೋನಿಯರಿಂದ ಏಳು ಸಾವಿರ ಮಂದಿ ಇಸ್ರೇಲರು ಯಾಬೇಷ್ ಗಿಲ್ಯಾದಿಗೆ ಓಡಿಹೋದರು.