Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:23 - ಪರಿಶುದ್ದ ಬೈಬಲ್‌

23 ದೇವರು ಕಳುಹಿಸಿದ ದುರಾತ್ಮವು ಸೌಲನ ಮೈಮೇಲೆ ಬಂದಾಗಲೆಲ್ಲಾ, ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ದುರಾತ್ಮವು ಸೌಲನನ್ನು ಬಿಟ್ಟುಹೋಗಿ ಅವನಿಗೆ ಉಪಶಮನವಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದೇವರಿಂದ ಕಳುಹಿಸಲಾಗಿದ್ದ ದುರಾತ್ಮ ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ಆ ದುರಾತ್ಮ ಸೌಲನನ್ನು ಬಿಟ್ಟುಹೋಗುತ್ತಿತ್ತು. ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವದು; ಅವನು ಉಪಶಮನಹೊಂದಿ ಚೆನ್ನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ, ದಾವೀದನು ಕಿನ್ನರಿಯನ್ನು ತೆಗೆದುಕೊಂಡು, ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:23
6 ತಿಳಿವುಗಳ ಹೋಲಿಕೆ  

ತರುವಾಯ ಸೌಲನು ಇಷಯನಿಗೆ, “ದಾವೀದನು ಇಲ್ಲಿಯೇ ನನ್ನ ಸೇವೆಯಲ್ಲಿ ಇರಲಿ. ನಾನು ಅವನನ್ನು ಬಹಳ ಪ್ರೀತಿಸುತ್ತೇನೆ” ಎಂಬ ಸುದ್ದಿಯನ್ನು ಹೇಳಿ ಕಳುಹಿಸಿದನು.


ಆದರೆ ಈಗ ಕಿನ್ನರಿ ಬಾರಿಸುವ ಒಬ್ಬನನ್ನು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು. ಅವನು ಕಿನ್ನರಿಯನ್ನು ಬಾರಿಸಿದಾಗ ಯೆಹೋವನ ಶಕ್ತಿಯು ಎಲೀಷನ ಮೇಲೆ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು