3 ಇಷಯನನ್ನು ಯಜ್ಞವನ್ನು ಅರ್ಪಿಸುವುದಕ್ಕೆ ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವೆನು. ನಾನು ನಿನಗೆ ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ನನಗೋಸ್ಕರ ಅಭಿಷೇಕಿಸಬೇಕು,” ಎಂದರು.
“ನಾಳೆ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ಒಬ್ಬ ಮನುಷ್ಯನನ್ನು ಕಳುಹಿಸುತ್ತೇನೆ. ಅವನು ಬೆನ್ಯಾಮೀನ್ ಕುಟುಂಬಕ್ಕೆ ಸೇರಿದವನು. ನೀನು ಅವನನ್ನು ಅಭಿಷೇಕಿಸು. ನನ್ನ ಜನರಾದ ಇಸ್ರೇಲರಿಗೆ ಅವನು ರಾಜನಾಗುತ್ತಾನೆ. ಈ ಮನುಷ್ಯನು ನನ್ನ ಜನರನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ. ನನ್ನ ಜನರ ಸಂಕಟವನ್ನು ನಾನು ನೋಡಿದ್ದೇನೆ; ನನ್ನ ಜನರ ಗೋಳನ್ನು ನಾನು ಆಲಿಸಿದ್ದೇನೆ” ಎಂದು ತಿಳಿಸಿದ್ದನು.
ಅಲ್ಲಿ ಯಾಜಕನಾದ ಚಾದೋಕನು ಮತ್ತು ಪ್ರವಾದಿಯಾದ ನಾತಾನನು ಅವನನ್ನು ಇಸ್ರೇಲಿನ ನೂತನ ರಾಜನನ್ನಾಗಿ ಅಭಿಷೇಕಿಸಲಿ. ಅನಂತರ ತುತ್ತೂರಿಯನ್ನು ಊದಿರಿ; ಎಲ್ಲರೂ ‘ರಾಜನಾದ ಸೊಲೊಮೋನನು ಚಿರಂಜೀವಿಯಾಗಿರಲಿ’ ಎಂದು ಆರ್ಭಟಿಸಲಿ.
ಹೆಬ್ರೋನಿಗೆ ಬಂದ ಇಸ್ರೇಲರೆಲ್ಲಾ ಅಲ್ಲಿ ಯೆಹೋವನ ಮುಂದೆ ದಾವೀದನೊಂದಿಗೆ ಒಪ್ಪಂದ ಮಾಡಿಕೊಂಡರು. ಆ ಅಧಿಪತಿಗಳೆಲ್ಲಾ ದಾವೀದನನ್ನು ಅಭಿಷೇಕಿಸಿ ಅವನನ್ನು ಇಸ್ರೇಲರ ಅರಸನನ್ನಾಗಿ ಮಾಡಿದರು. ಇದು ಯೆಹೋವನ ವಾಗ್ದಾನವಾಗಿತ್ತು. ಪ್ರವಾದಿಯಾದ ಸಮುವೇಲನ ಮೂಲಕ ಯೆಹೋವನು ಈ ವಾಗ್ದಾನವನ್ನು ಮಾಡಿದ್ದನು.