1 ಸಮುಯೇಲ 16:5 - ಪರಿಶುದ್ದ ಬೈಬಲ್5 ಸಮುವೇಲನು, “ಹೌದು, ಶುಭಕರವಾಗಿದೆ. ನಾನು ಯೆಹೋವನಿಗೆ ಯಜ್ಞವನ್ನು ಅರ್ಪಿಸಲು ಬಂದಿದ್ದೇನೆ. ನೀವೆಲ್ಲ ಸಿದ್ಧರಾಗಿ ಯಜ್ಞಕಾರ್ಯಕ್ಕಾಗಿ ನನ್ನೊಂದಿಗೆ ಬನ್ನಿ” ಎಂದು ಹೇಳಿದನು. ಸಮುವೇಲನು ಇಷಯನನ್ನೂ ಅವನ ಮಕ್ಕಳನ್ನೂ ಸಿದ್ಧಗೊಳಿಸಿದನು. ನಂತರ ಸಮುವೇಲನು ಅವರನ್ನು ಯಜ್ಞದಲ್ಲಿ ಭಾಗಿಗಳಾಗಲು ಆಹ್ವಾನಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನು, “ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ” ಎಂದು ಹೇಳಿ ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ ಎಂದು ಹೇಳಿ ಇಷಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು. ಅಧ್ಯಾಯವನ್ನು ನೋಡಿ |
ಪ್ರತಿಯೊಂದು ಔತಣಕೂಟದ ದಿನಗಳು ಮುಗಿದ ಮೇಲೆ ಯೋಬನು ಅವರನ್ನು ಶುದ್ಧೀಕರಿಸುತ್ತಿದ್ದನು. ಅದಕ್ಕಾಗಿ ಅವನು ಮುಂಜಾನೆಯಲ್ಲಿಯೇ ಎದ್ದು ತನ್ನ ಪ್ರತಿಯೊಬ್ಬ ಮಕ್ಕಳ ಹೆಸರಿನಲ್ಲಿ ಒಂದೊಂದು ಸರ್ವಾಂಗಹೋಮವನ್ನು ಅರ್ಪಿಸುತ್ತಿದ್ದನು. ಯಾಕೆಂದರೆ, “ಒಂದುವೇಳೆ ನನ್ನ ಮಕ್ಕಳು ಹೃದಯದಲ್ಲಿ ದೇವರನ್ನು ದೂಷಿಸಿ ಪಾಪಮಾಡಿರಬಹುದು” ಎಂಬುದು ಯೋಬನ ಆಲೋಚನೆಯಾಗಿತ್ತು. ತನ್ನ ಮಕ್ಕಳ ಪಾಪಕ್ಷಮೆಗಾಗಿ ಯೋಬನು ಯಾವಾಗಲೂ ಹೀಗೆ ಮಾಡುತ್ತಿದ್ದನು.