Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:6 - ಪರಿಶುದ್ದ ಬೈಬಲ್‌

6 ಇಷಯನು ಮತ್ತು ಅವನ ಮಕ್ಕಳು ಬಂದಾಗ, ಸಮುವೇಲನು ಎಲೀಯಾಬನನ್ನು ನೋಡಿದನು. ಸಮುವೇಲನು ತನ್ನಲ್ಲೇ ಯೋಚಿಸುತ್ತಾ, “ಯೆಹೋವನು ಆಯ್ಕೆ ಮಾಡಿರುವವನು ನಿಜವಾಗಿಯೂ ಅವನೇ ಇರಬೇಕು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಬರಲು ಅವನು ಎಲೀಯಾಬನನ್ನು ನೋಡಿ, ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಬರಲು ಅವನು ಎಲೀಯಾಬನನ್ನು ನೋಡಿ - ನಿಶ್ಚಯವಾಗಿ ಯೆಹೋವನು ಅಭಿಷೇಕಕ್ಕೆ ಆರಿಸಿಕೊಂಡವನು ಆತನ ಮುಂದೆ ಇದ್ದಾನೆ ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಬಂದಾಗ, ಅವನು ಎಲೀಯಾಬನನ್ನು ಕಂಡು, “ನಿಶ್ಚಯವಾಗಿ ಯೆಹೋವ ದೇವರ ಅಭಿಷಿಕ್ತನು ಅವರ ಮುಂದೆ ಇದ್ದಾನೆ,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:6
10 ತಿಳಿವುಗಳ ಹೋಲಿಕೆ  

ಇಷಯನ ಮೂವರು ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದರು. ಎಲೀಯಾಬನು ಮೊದಲನೆಯ ಮಗ. ಅಬೀನಾದಾಬನು ಎರಡನೆಯ ಮಗ. ಶಮ್ಮನು ಮೂರನೆಯ ಮಗ.


ದಾವೀದನು ತಾನು ತಂದಿದ್ದವುಗಳನ್ನು ಕಾವಲುಗಾರನ ಬಳಿಯಲ್ಲಿಟ್ಟು ಇಸ್ರೇಲ್ ಸೈನಿಕರಿದ್ದ ಸ್ಥಳಕ್ಕೆ ಓಡಿಹೋಗಿ ತನ್ನ ಸಹೋದರರ ಬಗ್ಗೆ ವಿಚಾರಿಸಿದನು.


ಆಮೇಲೆ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನರನ್ನು, “ನೀವು ತಾಬೋರ್ ಪರ್ವತದಲ್ಲಿ ಕೆಲವು ಜನರನ್ನು ಕೊಂದಿರುವಿರಿ. ಅವರು ಹೇಗಿದ್ದರು?” ಎಂದು ಕೇಳಿದನು. ಅವರು “ನಿನ್ನ ಹಾಗೆಯೇ ಇದ್ದರು. ಅವರಲ್ಲಿ ಪ್ರತಿಯೊಬ್ಬನೂ ಒಬ್ಬ ರಾಜಕುಮಾರನಂತೆ ಕಂಡನು” ಎಂದು ಉತ್ತರಕೊಟ್ಟರು.


ಯೆಹೂದ್ಯರಲ್ಲಿ ಎಲೀಹು (ದಾವೀದನ ಅಣ್ಣಂದಿರಲ್ಲೊಬ್ಬನು.) ಇಸ್ಸಾಕಾರರಲ್ಲಿ ಮೀಕಾಯೇಲನ ಮಗ ಒಮ್ರಿ.


ಯಾರೊಬ್ಬಾಮನು ತನ್ನಲ್ಲೇ, “ಜನರು ಜೆರುಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಹೋಗುವುದನ್ನೇ ಮುಂದುವರಿಸಿದರೆ, ಆಗ ಅವರು ದಾವೀದನ ಕುಟುಂಬವೇ ನಮ್ಮನ್ನು ಆಳಲಿ ಎಂದು ಅಪೇಕ್ಷೆಪಡಬಹುದು. ಜನರು ಯೆಹೂದದ ರಾಜನಾದ ರೆಹಬ್ಬಾಮನನ್ನೇ ಮತ್ತೆ ಅನುಸರಿಸಬಹುದು. ನಂತರ ಅವರು ನನ್ನನ್ನು ಕೊಂದುಬಿಡಬಹುದು.” ಅಂದುಕೊಂಡನು.


“ಇಸ್ರೇಲರ ದೇವರಾದ ಯೆಹೋವನು ಇಸ್ರೇಲರ ಹನ್ನೆರಡು ಕುಲಗಳನ್ನು ಮುನ್ನಡೆಸಲು ಯೆಹೂದ ಕುಲವನ್ನು ಆರಿಸಿಕೊಂಡಿದ್ದಾನೆ. ಆ ಕುಲದಿಂದ ದೇವರು ನನ್ನ ತಂದೆಯ ಕುಟುಂಬವನ್ನು ಆರಿಸಿದ್ದಾನೆ; ಆ ಕುಟುಂಬದಿಂದ ದೇವರು ಇಸ್ರೇಲರ ಅರಸನನ್ನಾಗಿ ನನ್ನನ್ನು ಆರಿಸಿಕೊಂಡಿದ್ದಾನೆ.


ರೆಹಬ್ಬಾಮನು ಯೆರೀಮೋತನ ಮಗಳಾದ ಮಹ್ಲತ್ ಎಂಬಾಕೆಯನ್ನು ಮದುವೆಯಾದನು. ಆಕೆಯ ತಾಯಿಯ ಹೆಸರು ಅಬೀಹೈಲ್. ಯೆರೀಮೋತನು ದಾವೀದನ ಮಗನಾಗಿದ್ದನು. ಅಬೀಹೈಲಳು ಇಷಯನ ಮಗನಾದ ಎಲೀಯಾಬನ ಮಗಳು.


ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನೀನು ಅಭಿಷೇಕಿಸಿದವನಿಗೆ ಕರುಣೆತೋರು.


ನಾಫೋತ್ ದೋರ್‌ಗೆ ಬೆನ್‌ಅಬೀನಾದಾಬನು ರಾಜ್ಯಪಾಲನಾಗಿದ್ದನು. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು